ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಅಂಬೇಡ್ಕರ್ ಗೆ ಅಪಮಾನ ಮಾಡಿರುವ ಆರೋಪದ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಾರಿ ವಿರೋಧ ವ್ಯಕ್ತವಾಗಿದೆ.ವಾಣಿಜ್ಯನಗರ ಹುಬ್ಬಳ್ಳಿಯಲ್ಲಿ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಸಮತಾ ಸೇನೆ, ಸಮಗಾರ ಹರಳಯ್ಯ ಸಮಾಜ ಸೇರಿ ವಿವಿಧ ದಲಿತ ಸಂಘ ಸಂಸ್ಥೆಗಳಿಂದ ಪ್ರತಿಭಟನೆ ನಡೆಸುವ ಮೂಲಕ ಹುಬ್ಬಳ್ಳಿಯ ಅಂಬೇಡ್ಕರ ವೃತ್ತದಲ್ಲಿ ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
Recruitment 2024: ಸುಪ್ರೀಂ ಕೋರ್ಟ್ʼನಲ್ಲಿದೆ ಉದ್ಯೋಗಾವಕಾಶ.! ಆಸಕ್ತರು ಇವತ್ತೇ ಅಪ್ಲೈ ಮಾಡಿ
ಸಂಸತ್ ನಲ್ಲಿ ಅಮಿತ ಶಾ ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ್ದಾರೆ. ಅಂಬೇಡ್ಕರ್ ಹೆಸರನ್ನ ಹೇಳಿದಷ್ಟು ಸಾರಿ ದೇವರ ಹೆಸರನ್ನು ಹೇಳಿದ್ದರೇ ಏಳು ಜನ್ಮಕ್ಕೆ ಸ್ವರ್ಗ ಸಿಕ್ತಿತ್ತು ಎಂದು ಹೇಳಿದ್ದಾರೆ. ಆ ಮೂಲಕ ಅಂಬೇಡ್ಕರ್ ಗೆ ಅಪಮಾನ ಮಾಡಿದ್ದಾರೆ ಎಂದು ಕಿಡಿ ಕಾರಿದ ಪ್ರತಿಭಟನಾಕಾರರು, ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ ಅವರನ್ನು ಗೃಹ ಖಾತೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.