ಬೆಂಗಳೂರು:- ರಾಜ್ಯದಲ್ಲಿ ಮುಂಗಾರು ಮತ್ತೆ ತೀವ್ರಗೊಂಡಿದ್ದು, ರಾಜ್ಯದ ಹಲವೆಡೆ ಬಿರುಸಿನ ಮಳೆ ಮುನ್ಸೂಚನೆ ನೀಡಲಾಗಿದೆ.
ಕೃಷಿ ಖಾತೆ ಮಿಸ್.. ಪ್ರಧಾನಿ ಮೋದಿ ಬಗ್ಗೆ ಸಚಿವ HD ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ!?
ರಾಜ್ಯದಲ್ಲಿ ಕಳೆದ 4 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿಯಾಗಿ ಮಳೆ ಸುರಿಯುತ್ತಿದೆ. ಸೋಮವಾರವೂ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಮೈಸೂರು, ತುಮಕೂರು, ಗದಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಿದೆ
ಜೂನ್ 2 ರಂದು ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ತಡವಾಗಿ ಮಳೆ ಸುರಿಯಲು ಆರಂಭಿಸಿದೆ. ಆದರೆ ರಾಜ್ಯಾದ್ಯಂತ ವಾಡಿಕೆಗಿಂತ ಶೇಕಡಾ 78 ರಷ್ಟು ಮಳೆ ಜಾಸ್ತಿಯಾಗಿದೆ. 5 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾದರೆ, 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಆಗಿದೆ. ಉಳಿದಂತೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ರೆಡ್ ಅಲರ್ಟ್ ಇರಲಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್, ಕಜಲಬುರಗಿ, ರಾಯಚೂರು, ಯಾದಗಿರಿ, ದಾವಣಗೆರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ. ಕೊಡಗಿನ ಮಡಿಕೇರಿ, ನಾಪೋಕ್ಲು ಭಾಗದಲ್ಲಿಯೂ ಭಾರೀ ಮಳೆಯಾಗುತ್ತಿದೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಜೋರಾಗಿ ಸುರಿಯುತ್ತಿದೆ.. ಸೋಮವಾರವೂ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇದೇ 11ರವೆರೆಗೆ ಆರೆಂ
![](https://ainlivenews.com/wp-content/uploads/2024/01/Ad-Banner-copy-scaled.jpg)