ಬೆಂಗಳೂರು:- ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ.
ಮಧುಮೇಹಿಗಳ ಗಮನಕ್ಕೆ: ಸಕ್ಕರೆ ಮಾತ್ರವಲ್ಲ, ನಿಮಗೆ ಈ ಆಹಾರಗಳೂ ವಿಷಕ್ಕೆ ಸಮಾನ..!
ಕರ್ನಾಟಕ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆಗೊಳಿಸಿದೆ. ಬ್ಯಾಕ್ಲಾಗ್ ಹುದ್ದೆಗಳು ಸೇರಿದಂತೆ ಒಟ್ಟು 158 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದವರಿಗೆ ಮಾಸಿಕ ವೇತನ 77,840-1,36,520 ರೂಪಾಯಿ ಇರಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ದಿನಾಂಕ ಫೆಬ್ರವರಿ 10, 2025ರಂದು ಆರಂಭವಾಗಿದ್ದು, ಕೊನೇ ದಿನಾಂಕ ಮಾರ್ಚ್ 03 ಕೊನೇ ಆಗಿದೆ.
ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿಯಾಗಿರಬೇಕು. ಅರ್ಜಿಗಳನ್ನು ಸಲ್ಲಿಸುವುದಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ವಯಸ್ಸು 40 ಮೀರಿರಬಾರದು.
ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಥವಾ 2ಬಿ ಅಥವಾ 3ಎ ಅಥವಾ 3ಬಿಗೆ ಸೇರಿದ ಅಭ್ಯರ್ಥಿಗಳ ವಯಸ್ಸು 38 ಮೀರಿರಬಾರದು. ಯಾವುದೇ ಇತರ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.
ಮಾಜಿ-ಸೈನಿಕ ಅಭ್ಯರ್ಥಿಗಳಿಗಾಗಿ, ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲಾಗಿದೆ. ಸೇವಾ ನಿರತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಭಾರತದ ಕಾನೂನಿನ ಮೇರೆಗೆ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು. ಅಲ್ಲದೆ, ಕರ್ನಾಟಕ ಹೈಕೋರ್ಟ್ ವ್ಯಾಪ್ತಿಗೆ ಒಳಪಡುವ ಜಿಲ್ಲಾ ನ್ಯಾಯಿಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಪ್ರಾಸಿಕ್ಯೂಷನ್ಸ್ ಮತ್ತು ಸರ್ಕಾರಿ ವ್ಯಾಜ್ಯ ನಿರ್ವಹಣೆ ಇಲಾಖೆಯಲ್ಲಿ ಸಹಾಯಕ ಸರ್ಕಾರಿ ಪ್ರಾಸಿಕ್ಯೂಟರ್/ಹೆಚ್ಚುವರಿ ಸರ್ಕಾರಿ ನ್ಯಾಯವಾದಿಗಳಾಗಿ ಕಾರ್ಯ ನಿರ್ವಹಿಸುತ್ತಿರಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಪೂರ್ವಭಾವಿ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆ ಹೀಗೆ ಮೂರು ಹಂತಗಳ ಆಯ್ಕೆ ಪ್ರಕ್ರಿಯೆಗಳು ಇರುತ್ತವೆ. ಪೂರ್ವಭಾವಿ ಪರೀಕ್ಷೆ ಅಂಕಗಳನ್ನು ಮುಖ್ಯ ಪರೀಕ್ಷೆಗೆ ಅರ್ಹತೆಗಾಗಿ ಮಾತ್ರ ಪರಿಗಣೆಗೆ ತೆಗೆದುಕೊಳ್ಳಲಾಗುತ್ತದೆ. ಒಟ್ಟು 100 ಅಂಕಗಳಿಗೆ ನಡೆಸುವ ಈ ಪರೀಕ್ಷೆಯಲ್ಲಿ, ಎಸ್ಸಿ/ಎಸ್ಟಿ ಅಭ್ಯರ್ಥಿಗಳು ಕನಿಷ್ಠ 50 ಅಂಕಗಳನ್ನು, ಇತರೆ ಕೆಟಗರಿ ಅಭ್ಯರ್ಥಿಗಳು ಕನಿಷ್ಠ 60 ಅಂಕಗಳನ್ನು ಪಡೆಯಬೇಕಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನಗಳು
<span;>* ಕರ್ನಾಟಕ ಹೈಕೋರ್ಟ್ ಸಿವಿಲ್ ಜಡ್ಜ್ ನೇಮಕ ಪ್ರಕ್ರಿಯೆ ಪೋರ್ಟಲ್ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ.
<span;>* Click Here To Apply Online ಮೇಲೆ ಕ್ಲಿಕ್ ಮಾಡಿ.
<span;>* ನಂತರ ಸೂಕ್ತ ದಾಖಲೆಗಳನ್ನು ನೀಡಿ ನೋಂದಣಿ ಮಾಡಿಕೊಳ್ಳಿ.
<span;>* ವಿವರ ಮಾಹಿತಿ ನೀಡಿ, ಅರ್ಜಿ ಸಲ್ಲಿಕೆ ಮಾಡಿ.
ವರ್ಗವಾರು ಹುದ್ದೆಗಳು ಹಂಚಿಕೆ ವಿವರ: ಸಾಮಾನ್ಯ ಅಭ್ಯರ್ಥಿ-59, ಪರಿಶಿಷ್ಟ ಜಾತಿ-23, ಪರಿಶಿಷ್ಟ ಪಂಗಡ- 10, ಪ್ರವರ್ಗ 1 – 19, 2A – 23, 2B-10, 3A-8,
3B ವರ್ಗದವರಿಗೆ 6 ಹುದ್ದೆಗಳು ಖಾಲಿಯಿವೆ. ಅರ್ಜಿ ಸಲ್ಲಿಕೆಗಾಗಿ https://karnatakajudiciary.kar.nic.in/ ವೆಬ್ ಸೈಟ್ಗೆ ಭೇಟಿ ನೀಡಬಹುದು.