ಮಾದಕ ದ್ರವ್ಯಗಳ ಪಿಡುಗು ಸಮಾಜದಲ್ಲಿ ಆಳವಾಗಿ ಬೇರೂರಿದೆ. ಇದರಿಂದಾಗಿ ಬಹುತೇಕ ಇಡೀ ಪೀಳಿಗೆಯು ವಿನಾಶದತ್ತ ಸಾಗುತ್ತಿದೆ. ಮಾದಕ ವ್ಯಸನ ಮತ್ತು ದುರುಪಯೋಗದ ಹಿಡಿತದಿಂದ ಜನರನ್ನು ರಕ್ಷಿಸಲು, ಮಾದಕ ವ್ಯಸನ ಮತ್ತು ಅಕ್ರಮ ಸಾಗಣೆ ವಿರುದ್ಧ ಅರಿವು ಮೂಡಿಸುವ ದೃಷ್ಟಿಯಿಂದ ಪ್ರತಿ ವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.
ಜಾಗತಿಕ ದಿನಾಚರಣೆ: ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಸೆಪ್ಟೆಂಬರ್ 7, 1987ರಲ್ಲಿ ನಿರ್ಣಯವನ್ನು ಅಂಗೀಕರಿಸಲಾಯಿತು. ನಿಷೇಧಿತ ಮಾದಕವಸ್ತು ಬಳಕೆ ಮತ್ತು ಕಳ್ಳಸಾಗಣೆಯನ್ನು ತಡೆಗಟ್ಟಲು ಪ್ರತಿ ವರ್ಷ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತಾರರಾಷ್ಟ್ರೀಯ ದಿನವನ್ನು ಆಚರಿಸಲು ನಿರ್ಣಯವು ಪ್ರಸ್ತಾಪಿಸಿದೆ.

ಮನುಕುಲದ ಉತ್ತಮ ಭವಿಷ್ಯಕ್ಕಾಗಿ ಮಾದಕ ವ್ಯಸನ ಮತ್ತು ಕಳ್ಳಸಾಗಣೆ ನಿಲ್ಲಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಮಾದಕ ವ್ಯಸನದ ಹೊರತಾಗಿ ವಿವಿಧ ವ್ಯಸನಗಳ ಬಗ್ಗೆ ಚರ್ಚಿಸಲು ದಿನವು ವೇದಿಕೆಯನ್ನು ಒದಗಿಸುತ್ತದೆ. ಭಾರತವು ಮಾದಕ ದ್ರವ್ಯ ಮತ್ತು ಅಕ್ರಮ ಸಾಗಣೆಯನ್ನು ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರಲಾಗಿದೆ.
ಯುಎನ್ಒಡಿಸಿ ಪ್ರಕಾರ, ಸರಿಸುಮಾರು 200 ಮಿಲಿಯನ್ ಜನರು ಕೊಕೈನ್, ಕ್ಯಾನಬೀಸ್, ಹಾಲೂಸಿನೋಜೆನ್ಸ್, ಓಪಿಯೇಟ್ಸ್ ಮತ್ತು ನಿದ್ರಾಜನಕದಂತಹ ಮಾದಕದ್ರವ್ಯಗಳ ಸೇವನೆಗೆ ಒಳಗಾಗಿದ್ದು, ಈ ದುಶ್ಚಟಗಳು ಸಾವಿಗೆ ದೂರವಾಗಿಸುತ್ತವೆ ಎಂದು ಕೂಡ ಎಚ್ಚರಿಸಿದೆ.
ಮಾದಕ ದ್ರವ್ಯದ ಪರಿಣಾಮ: ಮಾದಕ ದ್ರವ್ಯಗಳ ಕಳ್ಳ ಸಾಗಣೆ ಸಮಾಜದಲ್ಲಿ ದೊಡ್ಡ ಪಿಡುಗಾಗಿದೆ. ಇವುಗಳ ದೀರ್ಘಾವಧಿ ಬಳಕೆ ಕಳಪೆ ಆರೋಗ್ಯ, ಮಾನಸಿಕ ಅಸ್ವಸ್ಥತೆ, ಸಾವಿಗೆ ಕಾರಣವಾಗುತ್ತದೆ. ಇದು ಕೇವಲ ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜನ ಮೇಲೆ ಕೂಡ ಭಾರೀ ಪರಿಣಾಮ ಹೊಂದಿದೆ. ಇದು ಸಾಮಾಜಿಕವಾಗಿ, ದೈಹಿಕವಾಗಿ, ಸಾಂಸ್ಕೃತಿಕವಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಹಾಳುಮಾಡುತ್ತದೆ.
ಮಾದಕ ದ್ರವ್ಯಗಳಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ. ಇದು ಮೆದುಳು ಮತ್ತು ನರಮಂಡಲದ ಬೂದು ದ್ರವ್ಯವನ್ನು ನೇರವಾಗಿ ಪರಿಣಾಮ ಬೀರುತ್ತದೆ, ಇದು ಅವರಿಗೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಲು ಕಷ್ಟಕರವಾಗುತ್ತದೆ. ಮಾದಕ ವ್ಯಸನವು ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು.
