ಬೀದರ್ : ಬೀದರ್ನ ಬ್ರಿಮ್ಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ ಮಾಡಲಾಯಿತು. ಪತ್ನಿ ಸಚಿವ ಈಶ್ವರ್ ಖಂಡ್ರೆ ಮತ್ತು ಅವರ ಪತ್ನಿ ಡಾ.ಗೀತಾ ಖಂಡ್ರೆ ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ‘ಸಂಪೂರ್ಣ’ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬ್ರಿಮ್ಸ್ ಕಾಲೇಜ್ನ ಆಡಿಟೋರಿಯಂ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅವರು ಮಹಿಳೆಯರಿಗಾಗಿ ರಾಜ್ಯ ಸರ್ಕಾರ ಜಾರಿ ತಂದಿರುವ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು. ಗೃಹಲಕ್ಷ್ಮೀ, ಶಕ್ತಿ ಯೋಜನೆಗಳ ಬಗ್ಗೆ ಮಾತನಾಡಿದರು.
ಅಂತಾರಾಷ್ಟ್ರೀಯ ಮಹಿಳಾ ದಿನ ; ನೈರುತ್ವ ರೈಲ್ವೆ ಬೆಂಗಳೂರು ವಿಭಾಗದಿಂದ ವಿಶೇಷ ಗೌರವ
ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಐತಿಹಾಸಿಕ ಬಜೆಟ್ನ್ನ ಮಂಡಿಸಿದ್ದಾರೆ. ಅಭಿವೃದ್ದಿಗೆ ಪೂರಕ, ಆಶಾದಾಯಕವಾದ ಬಜೆಟ್ ಆಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ 4 ಲಕ್ಷ 9 ಸಾವಿರ ಕೋಟಿ ರೂ. ಗಾತ್ರದ ಬಜೆಟ್ ವಿನಿಯೋಗಿಸಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗಿದೆ, ಕೊಟ್ಟ ಮಾತಿನಂತೆ 5 ಸಾವಿರ ಕೋಟಿ ಮೀಸಲಿಡಲಾಗಿದೆ. ಬೀದರ್ ನಾಗರಿಕ ವಿಮಾನಯಾನ ಆರಂಭ ಆಗುತ್ತಿದೆ. ಜಿಲ್ಲಾಡಳಿತ ಸಂಕೀರ್ಣಕ್ಕೆ ಟೆಂಡರ್ ಕರೆಯಲಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿನ ಕ್ಯಾಥಲ್ಯಾಬ್ ಒಂದು ತಿಂಗಳೊಳಗಾಗಿ ಆರಂಭಿಸುತ್ತೇವೆ. ಕ್ಯಾನ್ಸರ್ ಪತ್ತೆ ವಿಭಾಗಕ್ಕೆ ಅಗತ್ಯ ಅನುದಾನ ಕೊಡುವ ಬಗ್ಗೆ ಸಿಎಂ ಘೋಷಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ಈ ಭಾಗದ ಅಭಿವೃದ್ಧಿ ಮಾಡ್ತೇವೆ ಎಂದು ಭರವಸೆ ನೀಡಿದರು.