ಬೆಂಗಳೂರು:- ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆ CIDಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಸಚಿನ್ ಪಾಂಚಾಳ್ ಆತ್ಮಹತ್ಯೆ ಕೇಸ್: ಯಾರೆಷ್ಟೇ ಹರಿದು ಕೊಂಡರೂ ರಾಜೀನಾಮೆ ಕೊಡಲ್ಲ- ಪ್ರಿಯಾಂಕ ಖರ್ಗೆ!
ಈ ಸಂಬಂಧ ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಘಟನೆ ಸಂಬಂಧ ಬಿಜೆಪಿ ಪ್ರಿಯಾಂಕ್ ಖರ್ಗೆಯವರ ಮೇಲೆ ಆರೋಪ ಮಾಡುತ್ತಿದೆ. ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದಿದ್ದಾರೆ.
ಸಚಿವರ ಹೆಸರು ಎಲ್ಲೂ ಡೆತ್ನೋಟ್ನಲ್ಲಿ ನೇರವಾಗಿ ಇಲ್ಲ. ಇನ್ನೂ ಬಿಜೆಪಿಯವರು ಸಿಬಿಐಗೆ ಕೊಡಲಿ ಎಂದು ಹೇಳುತ್ತಿದ್ದಾರೆ. ಅನಾವಶ್ಯಕ ರಾಜಕೀಯ ಮಾಡುವುದು ಸರಿಯಲ್ಲ. ಎಲ್ಲ ಕೇಸ್ಗಳನ್ನು ಸಿಬಿಐಗೆ ಕೊಡೋಕೆ ಸಾಧ್ಯವಿಲ್ಲ. ಸಿಐಡಿ ತನಿಖೆ ನಡೆಸಲು ಸಮರ್ಥವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ