ಬೆಂಗಳೂರು:- ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಾಗಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ನೀಡಲಾಗಿದೆ.
ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಯಾದಗಿರಿ ನಗರ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದವು. ತನಿಖೆಗಾಗಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಅವರು ಸಿಐಡಿ ತನಿಖಾಧಿಕಾರಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದ್ದಾರೆ.
ಕೆಇಎ ಪರೀಕ್ಷೆ ಅಕ್ರಮ ಆರೋಪಿ ಕಿಂಗ್ಪಿನ್ ಆರ್.ಡಿ ಪಾಟೀಲ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ನ 6. ರಂದು ಕಲಬುರಗಿ ನಗರದ ವರ್ಧಾ ಲೇಔಟ್ನ ಮಹಾಲಕ್ಷ್ಮಿ ಅಪಾರ್ಟ್ಮೆಂಟ್ನ ಕಾಂಪೌಂಡ್ ಹಾರಿ ಆರ್.ಡಿ. ಪಾಟೀಲ್ ಎಸ್ಕೇಪ್ ಆಗಿದ್ದ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಶುಕ್ರವಾರ ಮಹಾರಾಷ್ಟ್ರದ ಸೊಲ್ಲಾಪುರಲ್ಲಿ ಸಿಕ್ಕಿಬಿದ್ದಿದ್ದ. ಸದ್ಯ ಆತನನ್ನು ಬಂಧಿಸಿ ಕಲಬುರಗಿಗೆ ತರಲಾಗಿದೆ.