ಕಲಬುರಗಿ: ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಜನೆವರಿ 22 ರಂದು ಪ್ರಭು ಶ್ರೀ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಆಗಲಿದ್ದು,ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲ್ಯಾಣ ಕರ್ನಾಟಕ ಭಾಗದ ಆರಾಧ್ಯದೈವ ಶ್ರೀ ಶರಣಬಸವೇಶ್ವರ ಮಹಾ ಸಂಸ್ಥಾನಕ್ಕೆ ಆಹ್ವಾನ ನೀಡಲಾಗಿದೆ.
ಶರಣಬಸವೇಶ್ವರ ಸಂಸ್ಥಾನದ ಕಾರ್ಯದರ್ಶಿಯಾಗಿರುವ ಬಸವರಾಜ ದೇಶಮುಖ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಪ್ರಚಾರ ವಿಭಾಗದ ಪ್ರಮುಖರಾದ ಕೃಷ್ಣ ಜೋಶಿ ಆಹ್ವಾನ ಪತ್ತಿಕೆ ನೀಡಿ ಆಮಂತ್ರಿಸಿದರು.