ಬೆಂಗಳೂರು: ಮಂಡ್ಯದಿಂದ ಸ್ಪರ್ಧಿಸುವಂತೆ ಜೆಡಿಎಸ್ (JDS) ಯುವಮುಖಂಡ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಬಂದಿದೆ ಎಂದು ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಜೆಡಿಎಸ್ ನಾಯಕರು ಸೇರಿದಂತೆ ನಿಲ್ ಕುಮಾರಸ್ವಾಮಿಗೆ ಆಹ್ವಾನ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಮಂಡ್ಯದಲ್ಲಿ ನಿಖಿಲ್ ಕಣಕ್ಕಿಳಿಸಲು ನಮ್ಮ ವರಿಷ್ಠರಿಗೆ ಕೇಳಿದ್ದೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ಗೆ ಸೋಲಾಗಿತ್ತು. ಈ ಬಾರಿ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದೇವೆ. ಬಿಜೆಪಿ-ಜೆಡಿಎಸ್ ಜೊತೆಯಾಗಿ ಹೋಗಲು ತೀರ್ಮಾನ ಮಾಡಿದ್ದೇವೆ. ನಿಖಿಲ್ ಸ್ಪರ್ಧಿಸಬೇಕು ಎಂಬುದೇ ನಮ್ಮೆಲ್ಲರ ಒತ್ತಾಯ. ಮಂಡ್ಯ ಟಿಕೆಟ್ಗೆ ಮೊದಲ ಆದ್ಯತೆ ನಿಖಿಲ್ ಕುಮಾರಸ್ವಾಮಿಗೆ ಎಂದು ಹೇಳಿದ್ದಾರೆ.