ದೆಹಲಿ: ರಾಮಮಂದಿರದ (Ram Mandir) ರಾಮಲಲ್ಲಾನ ಪ್ರಾಣಪ್ರತಿಷ್ಠೆಗೆ ಕೇವಲ 7 ದಿನಗಳು ಬಾಕಿ ಉಳಿದಿದ್ದು, ಇಂದಿನಿಂದ ಪೂಜಾಕಾರ್ಯಗಳು ಆರಂಭಗೊಂಡಿದೆ. ಈಗಾಗಲೇ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗಿದೆ. ಇದೀಗ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕನಾಗಿರುವ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ (MS Dhoni) ಅವರಿಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಲಾಗಿದೆ.
ಸೋಮವಾರ ರಾಂಚಿಯಲ್ಲಿರುವ (Ranchi) ಅವರ ನಿವಾಸದಲ್ಲಿ ಆಹ್ವಾನವನ್ನು ನೀಡಿದ್ದು, ಎಂಎಸ್ ಧೋನಿ ಭಕ್ತಿಪೂರ್ವಕವಾಗಿ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಧೋನಿ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸಹ-ಪ್ರಾಂತೀಯ ಕಾರ್ಯದರ್ಶಿ ಧನಂಜಯ್ ಸಿಂಗ್ ಅವರು ಆಹ್ವಾನ ನೀಡಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆಗೆ ಧೋನಿಯನ್ನು ಆಹ್ವಾನಿಸಿದ ಸಂದರ್ಭ ಬಿಜೆಪಿ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕರ್ಮವೀರ್ ಸಿಂಗ್ ಸಹ ಉಪಸ್ಥಿತರಿದ್ದರು.
ಇತ್ತೀಚಿಗಷ್ಟೇ ಸ್ಟಾರ್ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ (Sachin Tendulkar) ಮತ್ತು ವಿರಾಟ್ ಕೊಹ್ಲಿ (Virat Kohli) ಅವರನ್ನೂ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಇದಾದ ಬಳಿಕ ಈಗ ಮತ್ತೊಬ್ಬ ಕ್ರಿಕೆಟರ್ ಎಂಎಸ್ ಧೋನಿ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಜನವರಿ 13 ರಂದು ಸಚಿನ್ ತೆಂಡೂಲ್ಕರ್ ಮುಂಬೈನಲ್ಲಿರುವ ತಮ್ಮ ನಿವಾಸದಲ್ಲಿ ಆಹ್ವಾನವನ್ನು ಸ್ವೀಕರಿಸಿದರು