ತುಮಕೂರು: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆ ದೇಶದ ಗಣ್ಯರಿಗೆ ಶ್ರೀ ರಾಮತೀರ್ಥ ಟ್ರಸ್ಟ್ ಆಹ್ವಾನ ನೀಡುತ್ತಿದೆ. ಈ ಮಧ್ಯೆ ಬೆಳ್ಳಾವಿ ಕಾರದ ಮಠದ ಸ್ವಾಮೀಜಿ ಶ್ರೀ ವೀರಬಸವ ಕಾರದ ಮಹಾಸ್ವಾಮೀಜಿಗಳಿಗೆ ಕೂಡ ಆಹ್ವಾನ ನೀಡಲಾಗಿದೆ.
ಉದ್ಘಾಟನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುವಂತೆ ಆಹ್ವಾನ ನೀಡಿದ್ದು ಮಠಕ್ಕೆ ಆಹ್ವಾನ ಕಳುಹಿಸಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ಬಂದ ಆಹ್ವಾನ.
ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪತ್ರದಲ್ಲಿ ಉಲ್ಲೇಖವಾಗಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ತೆರಳಲಿರುವ ಶ್ರೀಗಳು.