ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ಕೆಕೆಆರ್ ಮತ್ತು RR ತಂಡಗಳು ಸೆಣಸಾಡುತ್ತಿದೆ. ಮೊದಲು ಟಾಸ್ ಗೆದ್ದ RR ಬೌಲಿಂಗ್, ಕೆಕೆಆರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಕಳಚಿದ ಕನ್ನಡ ಚಿತ್ರರಂಗದ ಹಿರಿಯ ಕೊಂಡಿ -ಗಂಧದ ಗುಡಿಯ ಪ್ರಚಂಡ ‘ಕುಳ್ಳ’ ಕಣ್ಮರೆ
ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ 10 ಅಂಕಗಳೊಂದಿಗೆ ರಾಜಸ್ಥಾನ್ ರಾಯಲ್ಸ್ ಅಗ್ರಸ್ಥಾನದಲ್ಲಿದೆ. ಇತ್ತ 8 ಅಂಕಗಳನ್ನು ಹೊಂದಿರುವ ಕೊಲ್ಕತ್ತಾ ನೈಟ್ ರೈಡರ್ಸ್ ದ್ವಿತೀಯ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಕೆಕೆಆರ್ ತಂಡ ಗೆಲುವು ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಬಹುದು.
ಅತ್ತ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಆರ್ಆರ್ ತಂಡ ಕೂಡ ಈ ಪಂದ್ಯದಲ್ಲಿ ಗೆಲ್ಲಬೇಕಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
KKR vs RR ಮುಖಾಮುಖಿ:
ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಇದುವರೆಗೆ 28 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ತಂಡ 14 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಆರ್ಆರ್ ತಂಡ 13 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಈ ಪಂದ್ಯವು ಫಲಿತಾಂಶ ರಹಿತವಾಗಿತ್ತು. ಅಂದರೆ ಉಭಯ ತಂಡಗಳ ಮುಖಾಮುಖಿಯಲ್ಲಿ ಎರಡೂ ತಂಡಗಳು ಸಮಬಲ ಹೊಂದಿದೆ ಎನ್ನಬಹುದು