IPL ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಮಾರ್ಚ್ 22 ರಿಂದ ಲೀಗ್ ಶುರುವಾಗಲಿದೆ.
ಮದುವೆ ಆಗ್ತಿದ್ದಂಗೆ ಹೆಣ್ಮಕ್ಕಳು ದಪ್ಪ ಆಗ್ತಾರೆ ಯಾಕೆ!? ಇಲ್ಲಿದೆ ಉತ್ತರ!
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್ಸಿಬಿ ಧರಿಸಲಿರುವ ಹೊಸ ಜೆರ್ಸಿಯ ವಿನ್ಯಾಸವನ್ನು ಅನಾವರಣಗೊಳಿಸಲಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಜೆರ್ಸಿ ಧರಿಸಿರುವ ನಾಯಕ ರಜತ್ ಪಾಟಿದಾರ್ ಅವರ ಫೋಟೋವನ್ನು ಆರ್ಸಿಬಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಮೂಲಕ ಅನ್ಬಾಕ್ಸ್ ಕಾರ್ಯಕ್ರಮಕ್ಕೂ ಮುನ್ನವೇ ಆರ್ಸಿಬಿ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ.
ಅದರಂತೆ ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ಪು ಮತ್ತು ಕೆಂಪು ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಕಳೆದ ಸೀಸನ್ನಲ್ಲಿ ಆರ್ಸಿಬಿ ಕಡು ನೀಲಿ ಮತ್ತು ಕೆಂಪು ಬಣ್ಣ ಮಿಶ್ರಿತ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಹಳೆಯ ಜೆರ್ಸಿ ಕಲರ್ ಬ್ಲ್ಯಾಕ್-ರೆಡ್ಗೆ ಮರಳಿದೆ.
ಇನ್ನು ಈ ಬಾರಿಯ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲೇ ಆರ್ಸಿಬಿ ತಂಡ ಕಣಕ್ಕಿಳಿಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಐಪಿಎಲ್ 2025ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಆರ್ಸಿಬಿ ಐಪಿಎಲ್ ಅಭಿಯಾನ ಆರಂಭಿಸಲಿದೆ.