ಐಪಿಎಲ್ 2025ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ಐದು ಆಟಗಾರರನ್ನು ಉಳಿಸಿಕೊಂಡಿದೆ. ರಿಟೇನ್ ಪಟ್ಟಿಯನ್ನು ಸಲ್ಲಿಸುವ ಗಡುವು ಮುಕ್ತಾಯವಾಗುತ್ತಿದ್ದಂತೆ ಎಲ್ಲಾ ಫ್ರಾಂಚೈಸಿಗಳು ತಮ್ಮ ಆಟಗಾರರ ಪಟ್ಟಿಯನ್ನ ಬಿಡುಗಡೆ ಮಾಡಿದ್ದವು. ನಿರೀಕ್ಷೆಯಂತೆ ಮುಂಬೈ ಇಂಡಿಯನ್ಸ್ ತನ್ನ ಪ್ರಮುಖ ಆಟಗಾರರನ್ನು ಉಳಿಸಿಕೊಂಡಿದೆ.
Ind vs SA: ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ ಆಟಗಾರ!
ಇನ್ನೂ ಮುಂಬರುವ ಸೀಸನ್ ನಲ್ಲಿ ಮುಂಬೈ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಮುಂದುವರಿಯಲಿದ್ದಾರೆ.
ಕಳೆದ ಸೀಸನ್ನಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ ನೀಡಿರುವುದು. ಐಪಿಎಲ್ 2024 ರಲ್ಲಿ 14 ಪಂದ್ಯಗಳನ್ನಾಡಿದ್ದ ಮುಂಬೈ ಕೇವಲ 4 ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು.
ಹೀಗಾಗಿಯೇ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಬದಲಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ಗೆ ನಾಯಕತ್ವ ಒಲಿಯಲಿದೆ ಎನ್ನಲಾಗಿತ್ತು. ಇದರ ಜೊತೆಗೆ ರೋಹಿತ್ ಶರ್ಮಾಗೆ ಮತ್ತೆ ಕ್ಯಾಪ್ಟನ್ಸಿ ನೀಡುವ ಸುದ್ದಿಗಳು ಕೂಡ ಕಾಣಿಸಿಕೊಂಡಿದ್ದವು.
ಆದರೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಹಾರ್ದಿಕ್ ಪಾಂಡ್ಯ ಅವರನ್ನೇ ನಾಯಕನನ್ನಾಗಿ ಮುಂದುವರೆಸಲು ನಿರ್ಧರಿಸಿದೆ. ಹೀಗಾಗಿ ಐಪಿಎಲ್ 2025 ರಲ್ಲೂ ಪಾಂಡ್ಯ ಮುಂದಾಳತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕಣಕ್ಕಿಳಿಯಲಿದೆ. ಇನ್ನು ತಂಡದ ಮುಖ್ಯ ಕೋಚ್ ಆಗಿ ಮಹೇಲ ಜಯವರ್ಧನೆ ಕಾಣಿಸಿಕೊಳ್ಳಲಿದ್ದಾರೆ.
ಕಳೆದ ಸೀಸನ್ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು. ಹೀಗಾಗಿ ಹಿಟ್ಮ್ಯಾನ್ ಮುಂಬೈ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ 16.30 ಕೋಟಿ ರೂ.ಗೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿದಿದ್ದಾರೆ