ಇಂದು ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ KKR vs SRH ನಡುವೆ ಫೈನಲ್ ಪಂದ್ಯ ನಡೆಯಲಿದೆ.
ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ರೈಸರ್ಸ್ ಹೈದಾರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್ ಸೀಸನ್ 17 ಗೆ ತೆರೆ ಬೀಳಲಿದೆ. ವಿಶೇಷ ಎಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಈವರೆಗೆ 2 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಇದೀಗ ಮೂರನೇ ಸಲ ಕಪ್ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಅತ್ತ ಹೈದರಾಬಾದ್ ಫ್ರಾಂಚೈಸಿ ಕೂಡ ಈಗಾಗಲೇ 2 ಸಲ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ ಮೂರನೇ ಬಾರಿ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ
NBCC Recruitment: ಪರೀಕ್ಷೆಯಿಲ್ಲದೆ NBCC ಕಾರ್ಪೊರೇಷನ್’ನಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಇನ್ನು ಉಭಯ ತಂಡಗಳು ಈವರೆಗೆ 27 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಕೆಕೆಆರ್ ತಂಡ 18 ಬಾರಿ ಜಯ ಸಾಧಿಸಿದರೆ, ಎಸ್ಆರ್ಹೆಚ್ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಅದರಲ್ಲೂ ಈ ಸಲ ಆಡಲಾದ ಎರಡೂ ಪಂದ್ಯಗಳಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವು ಸಾಧಿಸಿದೆ. ಅಂದರೆ ಎಸ್ಆರ್ಹೆಚ್ ವಿರುದ್ಧ ಕೆಕೆಆರ್ ಮೇಲುಗೈ ಹೊಂದಿರುವುದು ಸ್ಪಷ್ಟ. ಇದಾಗ್ಯೂ ಅಂತಿಮ ಪಂದ್ಯದಲ್ಲಿ ಎಸ್ಆರ್ಹೆಚ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.