ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐ.ಪಿ.ಎಲ್ 2024 ಕ್ರಿಕೆಟ್ ಪಂದ್ಯವಾಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಸಂಚಾರ ಪೊಲೀಸರಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಾ.25ರಂದು 3 ಗಂಟೆಯಿಂದ ರಾತ್ರಿ 11ರವರೆಗೆ ಮಾರ್ಗಸೂಚಿ ಬಿಡಲಾಗಿದೆ.
IPL 2024: ತವರಿನಲ್ಲಿ ಇಂದು RCB Vs ಪಂಜಾಬ್ ಕಿಂಗ್ಸ್: ಯಾರ ಮುಡಿಗೆ ಗೆಲುವು?
ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ
> ಸ್ಟೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ,
> ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
> ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
> ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ.
ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು
> ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
> ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
> ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್
> ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ)
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರೀಡಾಭಿಮಾನಿಗಳನ್ನು ಕರೆದುಕೊಂಡು ಬರುವ ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್ ಗಳು ಪಿಕ್ ಆಪ್ ಮತ್ತು ಡ್ರಾಪ್ ಗೆ ಪ್ರತ್ಯೇಕ ಸ್ಥಳಗಳ ವ್ಯವಸ್ಥೆ ಮಾಡಲಾಗಿದೆ.