ಮುಂಬೈ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 17ನೇ ಆವೃತ್ತಿ IPLನ ಕೆಲ ಪಂದ್ಯಗಳು ವಿದೇಶದಲ್ಲಿ ನಡೆಯಲಿವೆ ಎಂಬ ಊಹಾಪೋಹಗಳಿಗೆ ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ (Arun Dhumal) ತೆರೆ ಎಳೆದಿದ್ದಾರೆ. ಈ ಬಾರಿ ಐಪಿಎಲ್ ಭಾರತದಲ್ಲೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಕತ್ರಿನಾ ಕೈಫ್
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಈ ಬಾರಿ ಐಪಿಎಲ್ ಭಾರತದಲ್ಲೇ ನಡೆಯಲಿದೆ. ಈ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಲೋಕಸಭೆ ಚುನಾವಣೆಗೆ (Lok Sabha Elections) ವೇಳಾಪಟ್ಟಿ ಪ್ರಕಟಗೊಳ್ಳಲು ಕಾಯುತ್ತಿದೇವೆ. ಆ ಬಳಿಕ ಐಪಿಎಲ್ ವೇಳಾಪಟ್ಟಿ ಅಂತಿಮಗೊಳಿಸುತ್ತೇವೆ ಎಂದಿದ್ದಾರೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್ ಅಂತ್ಯದ ವೇಳೆಗೆ ಟೂರ್ನಿ ಆರಂಭಗೊಳ್ಳುವ ನಿರೀಕ್ಷೆಯಿದೆ. ಏಪ್ರಿಲ್ನಲ್ಲಿ ಚುನಾವಣೆ ನಡೆಯಬಹುದು. ಹೀಗಾಗಿ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ. ಜೊತೆಗೆ ಎಲ್ಲಾ ಪಂದ್ಯಗಳು ಭಾರತದಲ್ಲಿ ನಡೆಯುವಂತೆ ನೋಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ