ಮುಂಬೈ: ಈ ಬಾರಿ ಲೋಕಸಭಾ ಚುನಾವಣೆ ಹೊರತಾಗಿಯೂ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಟೂರ್ನಿಯನ್ನು ವಿದೇಶಕ್ಕೆ ಸ್ಥಳಾಂತರಿಸುವುದಿಲ್ಲ. ಸಂಪೂರ್ಣ ಲೀಗ್ ಭಾರತದಲ್ಲೇ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೊದಲ 21 ಪಂದ್ಯಗಳು ಭಾರತದಲ್ಲಿ ನಡೆಯಲಿದ್ದು, ಉಳಿದ ಪಂದ್ಯಗಳು ದುಬೈಗೆ ಸ್ಥಳಾಂತರಿಸಲಾಗುತ್ತದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿತ್ತು. ಈ ಬೆನ್ನಲ್ಲೇ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.
ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಈ ಹಿಂದೆ ಮಾಡಿದಂತೆ ಟೂರ್ನಿಯನ್ನು ಸ್ಥಳಾಂತರಿಸುವುದಿಲ್ಲ. ಈ ಬಾರಿ ಸಂಪೂರ್ಣ ಐಪಿಎಲ್ ಭಾರತದಲ್ಲೇ ನಡೆಯಲಿದೆ. ಯಾವುದೇ ಕಾರಣಕ್ಕೂ ಸ್ಥಳಾಂತರಿಸುವುದಿಲ್ಲ. ಚುನಾವಣೆಗೂ ಸಮಸ್ಯೆಯಾಗದಂತೆ ಉಳಿದ ವೇಳಾಪಟ್ಟಿ ಸಿದ್ಧಪಡಿಸುವ ಕಾರ್ಯದಲ್ಲಿ ಬಿಸಿಸಿಐ ಮಂಡಳಿ ತೊಡಗಿದೆ. ಶೀಘ್ರವೇ ಅದನ್ನು ಸಾರ್ವಜನಿಕಗೊಳಿಸಲಿದೆ ಎಂದು ತಿಳಿಸಿದ್ದಾರೆ.
ಐಪಿಎಲ್ ಆರಂಭ ಯಾವಾಗ?
ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 22 ರಿಂದ ಆರಂಭವಾಗಲಿದೆ. ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಮೊದಲ 15 ದಿನಗಳು ಕಾಲ ನಡೆಯುವ 21 ಪಂದ್ಯಗಳ ವೇಳಾಪಟ್ಟಿ ಸದ್ಯಕ್ಕೆ ಪ್ರಕಟಿಸಲಾಗಿದೆ. ಮಾ. 22ರಿಂದ ಏಪ್ರಿಲ್ 7ರ ತನಕ 21 ಪಂದ್ಯಗಳು ನಡೆಯಲಿದ್ದು, ಈ ಪೈಕಿ 4 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯವು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಉಳಿದ ಪಂದ್ಯಗಳು ಸಂಜೆ 7.30ಕ್ಕೆ ಪ್ರಾರಂಭವಾಗಲಿವೆ. ಡಬಲ್ ಹೆಡ್ಡರ್ ದಿನದಂದು ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.