ಬೆಂಗಳೂರು: ನಗರದ ಹಲವು ಕಡೆಯಲ್ಲಿ ಮಳೆಯ ಸಿಂಚನ ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್ ಸುತ್ತಮುತ್ತ ಹನಿ ಮಳೆ
ಬೆಂಗಳೂರು ನಗರಾದ್ಯಂತ ಮೋಡ ಮುಸುಕಿದ ವಾತಾವರಣ ಲಾವೆಲ್ಲೆ ರಸ್ತೆ, ಎಂ.ಜಿ.ರಸ್ತೆ, ಮೆಜೆಸ್ಟಿಕ್ ಸುತ್ತ ತಂಪು ಗಾಳಿ ಸಿಲಿಕಾನ್ ಸಿಟಿಯಾದ್ಯಂತ ಮುಂದುವರಿದ ಸಾಧಾರಣ ಮಳೆಯಾಗಿದೆ. ಈ ಮಳೆಯಿಂದಾಗಿ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಂ ಕೂಡ ಆಗಿದೆ.
Namma Metro New Plan: ನಮ್ಮ ಮೆಟ್ರೋದಿಂದ ಸಾಲು ಸಾಲು ಅನಾಹುತ ಕೇಸ್: BMRCL ನಿಂದ ಬಿಗ್ ಪ್ಲಾನ್!
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವೆಡೆ ಹಗುರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.