ಬೆಳಗಾವಿ:-ರಾಜ್ಯ ಸರ್ಕಾರ ಬದುಕಿದೆಯೋ? ಸತ್ತಿದೆಯೋ? ಎಂದು ಹೇಳುವ ಮೂಲಕ ಆರ್ ಅಶೋಕ್ ಗುಡುಗಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಸರ್ಕಾರ ಬದುಕಿದೆಯೋ ಸತ್ತಿದೆಯೋ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರ ವಿರುದ್ಧ ವಾಕ್ಪ್ರಹಾರ ನಡೆಸಿದರು. ನಿಲುವಳಿ ಸೂಚನೆ ಮಂಡಿಸಿದ ಅವರು, ಸರ್ಕಾರ ಬಂದ ಮೇಲೆ 43 ಸಾವಿರ ಪ್ರಕರಣ ದಾಖಲಾಗಿದೆ. ಡಕಾಯಿತಿ, ದರೋಡೆ, ಕೊಲೆ ಪ್ರಕರಣ ಹೆಚ್ಚಾಗಿವೆ. ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆಯಾಯಿತು, ಪೊಲೀಸರೇ ಧರಣಿ ನಡೆಸಿದರು. ಭದ್ರಾವತಿ, ಬೆಳಗಾವಿಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆಯಾಯಿತು. ಶಿವಮೊಗ್ಗದಲ್ಲಿ ಟಿಪುಪ ಮತ್ತಿತರರ ಕಟೌಟ್ನಿಂದ ಗಲಾಟೆಯಾಯಿತು ಎಂದರು. ಕಾನೂನು ಸುವ್ಯವಸ್ಥೆ ವಿಷಯ ನಿಲುವಳಿ ಸೂಚನೆ ವ್ಯಾಪ್ತಿಗೆ ಬಾರದಿರುವುದರಿಂದ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ ಸ್ಪೀಕರ್ ಪ್ರತಿಪಕ್ಷದ ನಾಯಕರ ಮಾತಿಗೆ ಬ್ರೇಕ್ ಹಾಕಿದರು.