ಕಲಬುರಗಿ : ಹಣ ಇಲ್ಲದ ಕಾರಣ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ, ಖಜಾನೆ ಖಾಲಿ, ಆರ್ಥಿಕ ದಿವಾಳಿಯಾಗಿದೆ. ಹೊಟ್ಟೆಗೆ ಹಿಟ್ಟಿಲ್ಲದಿದ್ದರು ಜುಟ್ಟಿಗೆ ಮಲ್ಲಿಗೆ ಎಂಬಂತಾಗಿದೆ ಕಾಂಗ್ರೆಸ್ ಸರ್ಕಾರದ ಸ್ಥಿತಿ ಎಂದು ಕಲಬುರಗಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಮಾಡಿರುವ ಗುತ್ತಿಗೆದಾರರಿಗೆ ನೀಡಲೂ ಇವರ ಬಳಿ ಹಣ ಇಲ್ಲ, ಬಿಟ್ಟಿ ಭಾಗ್ಯವೂ ತಲುಪಿಸಲು ಆಗುತ್ತಿಲ್ಲ. ಖಜಾನೆ ಖಾಲಿಯಾಗಿದೆ. ವರ್ಗಾವಣೆ ದಂಧೆಯಲ್ಲಿ ಸರ್ಕಾರ ಸಂಪೂರ್ಣ ತೊಡಗಿಸಿಕೊಂಡಿದೆ ಎಂದರು.
ಯತೀಂದ್ರ ಸೂಪರ್ ಸಿಎಂ ರೀತಿ ಹಿಂಬಾಗಿಲಿನಿಂದ ಸರ್ಕಾರ ನಡೆಸುತ್ತಿದ್ದಾರೆ. ಇದು ಅಪ್ಪ ಮಕ್ಕಳ ಸರ್ಕಾರವಾ? ಇಲ್ಲಾ ಯತೀಂದ್ರನ ಸರ್ಕಾರವಾ? ಯತೀಂದ್ರ ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ. ಎಲ್ಲಾ ಆದೇಶಗಳನ್ನೂ ಮಗನೇ ನೀಡುತ್ತಿದ್ದಾರೆ. ಈ ಬಗ್ಗೆ ಸಿಎಂ ಸಿದ್ರಾಮಯ್ಯ ಕೂಡಲೇ ಸ್ಪಷ್ಟೀಕರಣ ಕೊಡಬೇಕು ಎಂದು ಆಗ್ರಹಿಸಿದರು. ಸಿಎಸ್ಆರ್ ಫಂಡ್ಗೆ ಸಂಬಂಧಿಸಿದ ಚರ್ಚೆ ಇದು ಎಂದು ಡಿಸಿಎಂ ಡಿಕೆಶಿ ಹೇಳುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದ ದಾಖಲೆ ಇದ್ದರೆ ಕೊಡಲಿ ಎಂದರು.