ಯುವತಿಯರು ಮಾಡ್ರನ್ ಡ್ರೆಸ್ ಹಾಕೋದು, ಬೋಲ್ಡ್ ಆಗಿರುವುದು ತಪ್ಪೇ, ನನ್ನ ಇಷ್ಟದಂತೆ ನಾನಿರೋದನ್ನು ಯಾಕೆ ಸಹಿಸಲ್ಲ ಎನ್ನುವುದು ಇವರ ಪ್ರಶ್ನೆ. ಅಂಥವರಿಗೆ ಅಸಲಿ ಬಣ್ಣ ಎಂಬ ಈ ಹಿಪಾಪ್ ಸಾಂಗ್ ಮೂಲಕ ಇಶಾನಿ ತಿರುಗೇಟು ಕೊಟ್ಟಿದ್ದಾರೆ. ಯೂಟ್ಯೂಬ್ ಚಾನೆಲ್ ನಲ್ಲಿ ‘ಅಸಲಿ ಬಣ್ಣ’ ಹಿಪ್ ಹಾಪ್ ಹಾಡು ರಿಲೀಸಾಗಿದೆ.
ಈ ಗೀತೆಯನ್ನು ಇಶಾನಿ ಹಾಡುವ ಜೊತೆಗೆ ಅದರಲ್ಲಿ ಅವರೇ ಅಭಿನಯಿಸಿದ್ದಾರೆ. ಅವರ ಒಂದಷ್ಟು ಸ್ನೇಹಿತರೇ ಸೇರಿ ಈ ಹಾಡನ್ನು ಮಾಡಿದ್ದಾರೆ. ವೆಂಕಟ್ ಅವರು ಈ ಹಾಡನ್ನು ನಿರ್ಮಿಸಿದ್ದು, ಗಿರಿಗೌಡ ಅವರ ನಿರ್ದೇಶನ, ಮಾರ್ಟಿನ್ ಅವರ ಸಾಹಿತ್ಯ, ಕೀರ್ತನ್ ಪೂಜಾರಿ ಅವರ ಕ್ಯಾಮೆರಾ ವರ್ಕ್, ಡಿಜೆ ಲೆಥಲ್ ಅವರ ಸಂಗೀತ ಸಂಯೋಜನೆ ಈ ಹಾಡಿಗಿದೆ.
Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..?
ಈ ಬಗ್ಗೆ ಮಾತನಾಡಿದ ಇಶಾನಿ ‘ಇದರ ಮೂಲಕ ಮಹಿಳೆಯರಿಗೆ ಬ್ಯಾಡ್ ಕಾಮೆಂಟ್ ಮಾಡುವವರಿಗೆ ಟಾಂಗ್ ಕೊಟ್ಟಿದ್ದೇನೆ. ಅಂಥವರಿಗೆ ನಮ್ಮ ಫೀಲಿಂಗ್ಸ್ ಅರ್ಥ ಆಗಬೇಕು. ನನ್ನ ಬಗ್ಗೆ ಯಾರೆಲ್ಲ ಪದಗಳನ್ನು ಬಳಸಿದ್ದರೋ ಅದೇ ಪದಗಳನ್ನು ಅವರಿಗೆ ವಾಪಸ್ ಕೊಟ್ಟಿದ್ದೇನೆ.
ಬಿಗ್ ಬಾಸ್ ನಡೀತಿರುವಾಗಲೇ ಈ ಹಾಡನ್ನು ಬರೆದಿದ್ದೆ. ನನಗನಿಸಿದ್ದನ್ನು ಹೇಳಿಕೊಳ್ಳಲು ಇದು ಪರ್ಫೆಕ್ಟ್ ವೇ ಅನಿಸಿತು. ಮಾರ್ಟಿನ್ ಇದಕ್ಕೆ ಪೈನಲ್ ಟಚ್ ಕೊಟ್ಟಿದ್ದಾರೆ. ಈ ಹಾಡಿನ ಉದ್ದೇಶ ಶೋಷಣೆಗೆ ಒಳಗಾದ ಹೆಣ್ಣುಮಕ್ಕಳನ್ನು ಸ್ಟ್ರಾಂಗ್ ಮಾಡುವುದು’ ಎಂದರು.