ಬಿಗ್ಬಾಸ್ ಮನೆಯಿಂದ ನಿನ್ನೆ ಎಲಿಮಿನೇಷನ್ ಆಗಿ ರ್ಯಾಪರ್ ಇಶಾನಿಹೊರಬಂದಿದ್ದಾರೆ.ರ್ಯಾಪ್ ಸಾಂಗ್ಗಳ ಮೂಲಕವೇ ಮನಗೆದ್ದಿದ್ದ ಇಶಾನಿ ಅವರು ಆರನೇ ವಾರಕ್ಕೇ ಬಿಗ್ ಬಾಸ್ ಮನೆಯಲ್ಲಿ ಆಟ ನಿಲ್ಲಿಸಿದ್ದಾರೆ.
ಕಳೆದ ವಾರ ವರ್ತೂರ್ ಸಂತೋಷ್ ಅವರ ಕಾರಣದಿಂದ ಎಲಿಮಿನೇಷನ್ ನಡೆದಿರಲಿಲ್ಲ. ಈ ವಾರ ಡಬಲ್ ಎಲಿಮಿನೇಷನ್ ವೀಕ್ ಇತ್ತು. ಇಬ್ಬರು ಈ ಮನೆಯಿಂದ ಹೊರಗೆ ಹೋಗಲಿದ್ದಾರೆ ಎಂದು ಕಿಚ್ಚ ಹೇಳಿದ್ದರು. ಶನಿವಾರದ ಎಪಿಸೋಡ್ ಕೊನೆಯಲ್ಲಿ, ಕಿಚ್ಚ, ‘ಈ ವಾರ ಒಬ್ಬರು ಮನೆಯಿಂದ ಹೊರಗೆ ಹೋಗುತ್ತಿದ್ದಾರೆ. ಅವರು ಯಾರು ಎಂದು ನಿಮಗೇ ಗೊತ್ತಿರಬೇಕು. ಅವರೇ ಎದ್ದು ನಿಂತುಕೊಳ್ಳಿ’ ಎಂದು ಕೇಳಿದರು. ಇಶಾನಿ ಎದ್ದು ನಿಂತುಕೊಂಡರು. ಕಿಚ್ಚ, ನಿಜ. ನಿಮ್ಮ ಪಯಣ ಬಿಗ್ಬಾಸ್ ಮನೆಯಲ್ಲಿ ಮುಗಿಯುತ್ತಿದೆ. ಆಲ್ದಿ ಬೆಸ್ಟ್ ಎಂದು ಹೇಳಿದರು.
ಕೊನೆಯದಾಗಿ ಇಶಾನಿ, ‘ನಾನು ಇನ್ನಷ್ಟು ಎಫರ್ಟ್ ಹಾಕಬೇಕಾಗಿತ್ತು. ಆಗಲಿಲ್ಲ. ಮನೆಯಿಂದ ಸಾಕಷ್ಟು ಕಲಿತುಕೊಂಡಿದ್ದೀನಿ. ಉಳಿದ ಎಲ್ಲ ಸ್ಪರ್ಧಿಗಳಿಗೆ ಆಲ್ ದಿ ಬೆಸ್ಟ್’ ಎಂದು ಹೇಳಿದರು. ಅಲ್ಲಿಗೆ ಶನಿವಾರದ ‘ಕಿಚ್ಚನ ಪಂಚಾಯಿತಿ’ ಮುಗಿದಿದೆ.