ಕೇಂದ್ರ ಗಾಜಾದ ಅಲ್-ಬುರೆಜಿ ಮತ್ತು ಅಲ್ ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಲಾಗಿದೆ. ಈ ಪ್ರದೇಶದಲ್ಲಿರುವ ಕ್ಲಿನಿಕ್ನ ಹೊರಭಾಗಕ್ಕೆ 4 ಶೆಲ್ಗಳು ಬಂದು ಅಪ್ಪಳಿಸಿವೆ.
Rohit Sharma: ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆದ್ದರೂ ಆತಂಕ ವ್ಯಕ್ತಪಡಿಸಿದ ರೋಹಿತ್ ಶರ್ಮಾ!
ಹಮಾಸ್ ಉಗ್ರರು ಅಕ್ಟೋಬರ್ 7ರಂದು ಇಸ್ರೇಲ್ನ ದಕ್ಷಿಣ ಭಾಗದಲ್ಲಿ ಸಾಳಿ ನಡೆಸಿ 1,200 ಮಂದಿಯನ್ನು ಹತ್ಯೆ ಮಾಡಿದ್ದರು. ಜತೆಗೆ 250ಕ್ಕೂ ಹೆಚ್ಚು ಮಂದಿಯನ್ನು ಅಪಹರಿಸಿದ್ದರು.
ಇಸ್ರೇಲ್ ವಾಯು ದಾಳಿಗೆ ಗಾಜಾದ ರಫಾದಲ್ಲಿನ ನಿರಾಶ್ರಿತರ ಶಿಬಿರದಲ್ಲಿದ್ದ ಕನಿಷ್ಠ 45 ಮಂದಿ ಮೃತಪಟ್ಟಿದ್ದರು. ಕಳೆದ ತಿಂಗಳು ಈ ಘಟನೆ ವರದಿಯಾಗಿತ್ತು. ಇದರಲ್ಲಿ ಅನೇಕ ಮಕ್ಕಳೂ ಸೇರಿದ್ದಾರೆ. ರಫಾದಲ್ಲಿ ನಡೆಸುತ್ತಿರುವ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯವು ಇಸ್ರೇಲ್ಗೆ ಆದೇಶಿಸಿದ ಕೆಲವೇ ದಿನಗಳಲ್ಲಿ ಈ ದಾಳಿ ನಡೆದಿರುವುದು ವ್ಯಾಪಕ ಆಕ್ರೋಶಕ್ಕೆ ಒಳಗಾಗಿದೆ.
ಗಾಜಾ ಭಾಗದಲ್ಲಿನ ಗಡಿಯಲ್ಲಿ ಕಳೆದ ತಿಂಗಳ ಆರಂಭದಲ್ಲಿ ಭೂ ಕಾರ್ಯಾಚರಣೆ ನಡೆಸಿದ ಇಸ್ರೇಲ್, ಗಡಿಯಲ್ಲಿ ದಾಟುವ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸಿದೆ. ಅದಕ್ಕೂ ಮುನ್ನ ಮಾನವೀಯ ನೆರವು ಹರಿಸಲು ರಫಾ ಪ್ರಮುಖ ಪ್ರವೇಶ ಕೇಂದ್ರವಾಗಿತ್ತು.