ಬೀದರ್;- ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಕಷ್ಟದ ಕೆಲಸ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕೆಲವು ಸಮಯಗಳ ಕಾಲ ಚುನಾವಣ ರಾಜಕಾರಣದಿಂದ ದೂರವುಳಿಯಲು ಬಯಸಿದ್ದೇನೆ. ಸದ್ಯ ನನ್ನ ಹೊಸ ಚಲನಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಅಥವಾ ಚುನಾವಣ ರಾಜಕಾರಣದಲ್ಲಿ ಸಕ್ರಿಯವಾಗಿರುವುದು ಕಷ್ಟದ ಕೆಲಸ ಎಂದರು.

ಲೋಕಸಭಾ ಚುನಾವಣೆಗೆ ಬಿಜೆಪಿ ಜತೆ ಮೈತ್ರಿ ಕುರಿತಂತೆ ಎಚ್.ಡಿ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಶೀಘ್ರ ನಿರ್ಧಾರ ಕೈಗೊಳ್ಳಲಿದ್ದಾರೆ. ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಬಲವಾಗಿದ್ದು, ಅಲ್ಲಿ ಬಿಜೆಪಿ ನಮಗೆ ಸಹಕರಿಸಲಿ. ಅದೇ ರೀತಿ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪ್ರಬಲವಾಗಿದ್ದು, ಅಲ್ಲಿ ನಾವು ಅವರಿಗೆ ಸಹಕರಿಸುವ ಬಗ್ಗೆ ಮಾತ್ರ ನಮ್ಮ ನಾಯಕರಾದ ಕುಮಾರಸ್ವಾಮಿ ಹೇಳಿದ್ದಾರೆ ಎಂದು ನಿಖಿಲ್ ಹೇಳಿದ್ದಾರೆ
