ಮಂಡ್ಯ : ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ಎಚ್ಡಿ ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು.
ಆದರೆ, ಸೋಲಿನ ಭಯದಿಂದ ಇಲ್ಲಿಗೆ ಬಂದು ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ. ಹೀಗಾಗಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಿದರು. ನರೇಂದ್ರ ಮೋದಿಯವರ ಅಚ್ಚೆ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೆ ದಿನ್ ಕಾಣಿಸಿಯೇ ಇಲ್ಲ.
ನಿಮಗೆ ಈರುಳ್ಳಿ ಕತ್ತರಿಸಿ ಫ್ರಿಡ್ಜ್ʼನಲ್ಲಿ ಇಡೋ ಅಭ್ಯಾಸವಿದೆಯಾ?! ಇದೆಷ್ಟು ಡೇಂಜರ್ ಗೊತ್ತಾ ?
ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ – ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಿಂದ ರಾಜ್ಯದ ಪ್ರತಿ ಕುಟುಂಬಗಳಿಗೆ, ಪ್ರತಿ ತಿಂಗಳು 5 ರಿಂದ 6 ಸಾವಿರ ರೂಪಾಯಿ ಒದಗಿ ಬರುವಂಥಾ ನೆರವಿನ ಕಾರ್ಯಕ್ರಮಗಳನ್ನು ನೀಡಿದ್ದೇವೆ ಎಂದರು.