ಚೆನ್ನೈ:- ಕೇಂದ್ರದಲ್ಲಿ ಮಾತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಬರಲಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬರುವುದಂತೂ ಖಚಿತ. 400 ಅಥವಾ 450 ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿಯಲಿದೆ ಎಂಬುದಷ್ಟೇ ಮುಂದಿರುವ ಪ್ರಶ್ನೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಗೆಲುವಿಗೆ ತಮಿಳುನಾಡಿನ ಕೊಡುಗೆ ಎಷ್ಟು? ದೇಶದ ವಿವಿಧ ಭಾಗಗಳ ಪಾಲುದಾರಿಕೆ ಏನು ಎಂಬುದು ಈಗಿನ ಚರ್ಚೆಯ ವಿಷಯ ಎಂದು ಅವರು ಹೇಳಿದ್ದಾರೆ.
2024 ಬಿಜೆಪಿ ಪಾಲಿಗೆ ಐತಿಹಾಸಿಕ ವರ್ಷ ಆಗಿರಲಿದೆ. ಸ್ಥಿರ ಸರ್ಕಾರ ಹಾಗೂ ದೃಢವಾದ ಪ್ರಧಾನಿಯನ್ನು ಜನರು ಬಯಸುತ್ತಿದ್ದಾರೆ. ದೇಶಕ್ಕೆ ಬಲಿಷ್ಠ ಪ್ರಧಾನಿ ಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಸಾರ್ವತ್ರಿಕ ಚುನಾವಣೆಯು ರಾಜ್ಯಗಳನ್ನು ಅವಲಂಬಿಸಿಲ್ಲ. ಹಾಗಾಗಿ ತಮಿಳುನಾಡಿನಲ್ಲೂ ಬಿಜೆಪಿ ಗಮನಾರ್ಹ ಸಾಧನೆ ಮಾಡಲಿದ್ದು, ರಾಜ್ಯದಿಂದ ಬಿಜೆಪಿ ಅಭ್ಯರ್ಥಿಗಳು ಗೆದ್ದು ಇತಿಹಾಸ ರಚಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.