ಬೆಂಗಳೂರು:– ದೇಶದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ಖಚಿತ ಎಂದು ಭೂಪೇಂದ್ರ ಯಾದವ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸೀಟುಗಳು ಸಿಗೋದು ಖಚಿತ. ಮತ್ತೆ ಮೋದಿಯವರು ಪ್ರಧಾನಿ ಆಗುವುದು ಖಚಿತ ಎಂದರು.
ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇಂದ್ರದಿಂದ ಅನೇಕ ಅನುದಾನಗಳು, ಜಿಎಸ್ಟಿ ಬಾಕಿ ಬಂದರೂ ಅಭಿವೃದ್ಧಿ ಶೂನ್ಯ. ಗ್ಯಾರಂಟಿ ಹೆಸರಿನಲ್ಲಿ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಜನರಿಗೆ ವಂಚಿಸುತ್ತಿದೆ ಎಂದು ಆರೋಪಿಸಿದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ 28 ಕ್ಷೇತದಲ್ಲೂ ಜಯಿಸಲಿದೆ. ಬಳಿಕ ರಾಜ್ಯದಲ್ಲಿ ಕಮಲ ಅರಳುವುದು ಗ್ಯಾರಂಟಿ. ಪಶ್ಚಿಮ ಬಂಗಾಳ ಹಾಗೂ ಬಿಹಾರದ ಬೆಳವಣಿಗೆಯಿಂದ ಕಾಂಗ್ರೆಸ್ ಮತ್ತಷ್ಟು ಕುಗ್ಗಿದೆ ಎಂದು ಭೂಪೇಂದ್ರ ಯಾದವ್ ಹೇಳಿದರು.