ಹಾವೇರಿ : 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲ ಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರದಲ್ಲಿ ಹಣ ಇಲ್ಲದಿರುವುದಕ್ಕೆ ಈ ರೀತಿಯ ಕಮಿಷನ್ ಮಾಡಿಕೊಂಡು ಕುಳಿತಿದ್ದೀರಿ, ಆರು ವಾರದಲ್ಲಿ ವರದಿ ನೀಡದಿದ್ದರೆ,
6 ತಿಂಗಳಲ್ಲಿ ಸಂಭವಿಸಲಿರುವ ಹೃದಯಾಘಾತವನ್ನು ರಕ್ತಪರೀಕ್ಷೆಯಿಂದಲೇ ಪತ್ತೆ ಹಚ್ಚಬಹುದು !
ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಸರಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಮೇಲೆ ಒತ್ತಡ ಇದ್ದು, ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ ಅವರು ಸರ್ಕಾರದ ಪರವಾಗಿ ಮಾತನಾಡುತ್ತಿದ್ದಾರೆ. ಆ ರೀತಿ ಮಾತನಾಡುವಂತೆ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ನಿಲ್ಲಿಸಿಬಿಟ್ಟಿದ್ದಾರೆ, ಅಭಿವೃದ್ಧಿ ಶೂನ್ಯವಾಗಿದೆ ಎಂದು ಹೇಳಿದರು.