ಬೆಂಗಳೂರು:- ಪ್ರಜ್ವಲ್ನನ್ನು ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು ಎಂದಿದ್ದ ಸಿದ್ದರಾಮಯ್ಯಗೆ ಹೆಚ್ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
Mandya: ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯನ್ನು ವಂಚಿಸಿ ದರೋಡೆ!
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ. ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ. “ಅತ್ಯಾಚಾರದ ವಿಡಿಯೋ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ” ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ ಎಂದು ಕುಟುಕಿದ್ದಾರೆ.
ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ ಇದು? ದಯಮಾಡಿ ನೀವು ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ. ನಿಮ್ಮ ಪಕ್ಕದಲ್ಲಿ ಪೆನ್ ಡ್ರೈವ್ ಹಂಚಿಕೆದಾರ ಕೂತಿದ್ದಾರೆ. ಆ CD ಶಿವು ಚುನಾವಣಾ ಸ್ವಾರ್ಥಕ್ಕಾಗಿ ಹೆಣ್ಮಕ್ಕಳ ಮಾನವನ್ನು ಪೆನ್ ಡ್ರೈವುಗಳಿಗೆ ತುಂಬಿಸಿ ಹಾದಿಬೀದಿಯಲ್ಲಿ ಮಾರಿಕೊಂಡಿದ್ದು ನಿಮಗೆ ಗೊತ್ತಿಲ್ಲವೇ? ಸ್ವಯಂ ಘೋಷಿತ ಸಂವಿಧಾನ ತಜ್ಞ ಬಿರುದಾಂಕಿತರಾದ ನೀವು, ಇಂಥ ಮಾನದ್ರೋಹಿಯನ್ನು ಪಕ್ಕದಲ್ಲೇ ಕೂರಿಸಿಕೊಳ್ಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ಪ್ರಶ್ನೆ ಮಾಡಿಕೊಳ್ಳಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ