ಕೊರಟಗೆರೆ:- ಸರಕಾರವು ಈ ಬಾರಿ ಬರದ ಸವಾಲನ್ನು ಎದುರಿಸಬೇಕಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ವರ್ಷ ರಾಜ್ಯದಲ್ಲಿ ಮಳೆ ಅತ್ಯಂತ ಕಡಿಮೆಯಾಗಿದ್ದು, ಬರದ ಛಾಯೆ ಆವರಿಸಿದೆ ಸರಕಾರವು ಈ ಸವಾಲನ್ನು ಎದುರಿಸಬೇಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಈ ಸಂಬಂಧ ಮಾತನಾಡಿದ ಅವರು,ಈ ವರ್ಷ ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ದವಾಗುತ್ತಿದೆ, ಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಮತ್ತು ಜನರಿಗೆ, ರೈತರಿಗೆ ವಿದ್ಯುತ್ ನಿರ್ವಹಣೆ ಸವಾಲಗಿದೆ ಆದರೆ ಅದನ್ನು ನಿಭಾಹಿಸಲು ಎಲ್ಲಾ ರೀತಿ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದರು.
ಕೊರಟಗೆರೆ ಸೇರಿದಂತೆ ಸುತ್ತಮುತ್ತಲ ಹಾಗೂ ಬಯಲು ಸೀಮೆಯ ಪ್ರದೇಶಗಳಿಗೆ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಗಳನ್ನು ಸರ್ಕಾರವು ತ್ವರಿತವಾಗಿ ಪೂರ್ಣಗೊಳಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ, ಈ ಯೋಜನೆಯಿಂದ ರೈತರ ಕೃಷಿಗೆ ಮತ್ತು ಕುಡಿಯುವ ನೀರಿಗೆ ಬಹಳ ಅನುಕೂಲವಾಗಲಿದೆ, ಈ ನಿಟ್ಟಿನಲ್ಲಿ ಸರ್ಕಾರವು ಕಾರ್ಯಪ್ರವೃತ್ತವಾಗಲಿದೆ ಎಂದ ಅವರು ಈ ಗ್ರಾಮದಲ್ಲಿನ ವೀರಾಂಜನೇಯ್ಯ ದೇವಾಲಯ ನಿರ್ಮಾಣಕ್ಕೆ ಎಲ್ಲಾ ಸಹಕಾರ ನೀಡಲಾಗುವುದು ಮನುಷ್ಯನು ಜೀವನದಲ್ಲಿ ಧಾರ್ಮಿಕತೆಯಲ್ಲಿ ತೊಡಗಿಸಿಕೊಳ್ಳವುದರಿಂದ ಸಮಾಜದಲ್ಲಿ ಎಷ್ಟೋ ಅಪರಾಧಗಳು ಕಡಿಮೆಯಾಗುತ್ತವೆ ಎಂದರು.