ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ B.Y ವಿಜಯೇಂದ್ರ ಅವರಿಗೆ ನೀಡಿದ್ದರಿಂದ ಇತರೆ ಆಕಾಂಕ್ಷಿಗಳಿಗೆ ನಿರಾಸೆ ಮೂಡುವುದು ಸಹಜ’ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಗುರಿ ಇಟ್ಟಿದ್ದೇವೆ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರಿನ (Bengaluru) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಪಕ್ಷದ ರಾಷ್ಟ್ರ ನಾಯಕರು ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಇದರಿಂದ ನಮಗೂ ಖುಷಿಯಾಗಿದೆ. ಆ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದು ಸಾಮಾನ್ಯ ಎಂದಿದ್ದಾರೆ.
ವಿಜಯೇಂದ್ರ ಅವರು ಯಡಿಯೂರಪ್ಪ ಗರಡಿಯಲ್ಲಿ ಪಳಗಿದ್ದಾರೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ಇರಲಿದೆ. ಅವರೊಟ್ಟಿಗೆ ಸೇರಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.