ಬೆಂಗಳೂರು:- ಲೀಡರ್ ಗಳೆಲ್ಲಾ ಕಣ್ಣೀರು ಹಾಕೋದು ಸರಿಯಲ್ಲ ಎಂದು ಹೇಳುವ ಮೂಲಕ ನಿಖಿಲ್ ಗೆ ಮಹದೇವಪ್ಪ ತಿರುಗೇಟು ಕೊಟ್ಟಿದ್ದಾರೆ.
ಹೊಳೆ ಆಂಜನೇಯಸ್ವಾಮಿಗೆ ಹರಕೆ: ಗರ್ಭಗುಡಿ ಮುಂಭಾಗ ಕುಳಿತು ಪ್ರಾರ್ಥನೆ ಸಲ್ಲಿಸಿದ ಸಿ.ಪಿ.ಯೋಗೇಶ್ವರ್
ಕಣ್ಣೀರು ಹಾಕಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಭಾರ ಕಡಿಮೆ ಆಗುತ್ತೆ. ಮನಸು ಹಗರು ಆಗುತ್ತೆ. ಡಿಕೆ ಸುರೇಶ್ ಸೋತಿದ್ದಕ್ಕೆ ಅವರು ಅತ್ತರು. ಅಭಿವೃದ್ಧಿ ಮಾಡಿ ಸೋತ್ರು ಎಂದು ಅತ್ತರು. ಆದರೆ ಚುನಾವಣೆ ಬಂದಾಗ ಅಳೋದು ಸರಿಯಲ್ಲ. ಅವರೆಲ್ಲ ಲೀಡರ್ಗಳು. ಹೀಗೆ ಅಳೋದು ಸರಿಯಲ್ಲ ಎಂದು ತಿರುಗೇಟು ಕೊಟ್ಟರು.
ದೇವೇಗೌಡರು ಅಂಬ್ಯುಲೆನ್ಸ್ನಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂಬ ಡಿಕೆ ಸುರೇಶ್ ಹೇಳಿಕೆ ವಿಚಾರವಾಗಿ ಮಾತನಾಡಿ, ಎಲ್ಲರ ಆರೋಗ್ಯ ಚೆನ್ನಾಗಿ ಇರಲಿ. ಕಣ್ಣೀರು, ರಾಜಕೀಯ, ಕ್ಷೇತ್ರದ ಅಭಿವೃದ್ಧಿಗೆ ಎಲ್ಲಿ ಸಂಬಂಧ ಇದೆ. ಜನರು ಕ್ಷೇತ್ರದ ಅಭಿವೃದ್ಧಿಯನ್ನು ಚುನಾವಣೆಯಲ್ಲಿ ನೋಡುತ್ತಾರೆ. ಕಣ್ಣೀರಿಗೂ ಚುನಾವಣೆಗೂ ಸಂಬಂಧವಿಲ್ಲ ಎಂದು ಕಿಡಿಕಾರಿದರು.
ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಎಲ್ಲಾ ಮತಗಳ ಮೇಲೆ ಕಣ್ಣು ಇಟ್ಟಿರುತ್ತಾರೆ.ಆದರೆ ಜನ ಎಲ್ಲವನ್ನೂ ತೀರ್ಮಾನ ಮಾಡ್ತಾರೆ. ಏನು ಕೆಲಸ ಮಾಡುತ್ತಾರೆ ಏನು ಅಭಿವೃದ್ಧಿ ಮಾಡುತ್ತಾರೆ ಎಂದು ಜನ ನೋಡಿ ಮತ ಹಾಕುತ್ತಾರೆ. ಚನ್ನಪಟ್ಟಣ ಕಾಂಗ್ರೆಸ್ ಪರ ಇದೆ. ಈಗ ವಾತಾವರಣ ಶುರುವಾಗಿದೆ ಎಂದು ತಿಳಿಸಿದರು.