ಹುಬ್ಬಳ್ಳಿ : ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಹಾಗೂ ಅತೃಪ್ತಿ ಏನೇ ಇರಲಿ, ಬಹಿರಂಗ ಚರ್ಚೆ ಸರಿಯಲ್ಲ ಎಂದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಕುರಿತು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಮಾಜಿ ಸಚಿವ ಸೋಮಣ್ಣ ಬಂಡಾಯದ ಕುರಿತು ಜೋಶಿ ಪ್ರತಿಕ್ರಿಯೆ ಸಹ ಹೇಳಿಕೆ ನೀಡಿದ ಅವರು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇಮಕದ ನಂತರ ಸೋಮಣ್ಣ ಅತೃಪ್ತಿ ವ್ಯಕ್ತಪಡಿಸಿದ ಕುರಿತು ಹೇಳಿಕೆ ನೀಡಿದ ಅವರು ಮಾಜಿ ಸಚಿವ ಸೋಮಣ್ಣ ಹೈಕಮಾಂಡ್ ಗೆ ದೂರು ನೀಡುತ್ತಿರುವ ಕುರಿತು ಮಾಹಿತಿ ಇಲ್ಲ ನಿಮ್ಮ ಕುಂದು ಕೊರತೆಗಳು ಏನೇ ಇರಲಿ
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಅದನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ಗಮನಕ್ಕೆ ತರಲಿ ಅದನ್ನು ಬಿಟ್ಟು ಮಾಧ್ಯಮ ಮುಂದೆ ಮಾತನಾಡುವುದು ಸರಿಯಲ್ಲ ಈ ಕುರಿತು ಬೇಕಾದರೆಇತರ ರಾಷ್ಟ್ರೀಯ ನಾಯಕರಿಗೆ ಮಾಹಿತಿ ನೀಡಲಿ
ಮಾಧ್ಯಮದ ಮೂಲಕ ಇದನ್ನು ಚರ್ಚಿಸುವುದು ಒಳ್ಳೆಯದಲ್ಲ ಸೋಮಣ್ಣ ಪ್ರಮುಖ ನಾಯಕರು
ವೈಯಕ್ತಿಕವಾಗಿಯ ಆತ್ಮೀಯರಾಗಿದ್ದು ಅವರ ಜೊತೆ ಮಾತಾಡ್ತೇನೆ ಎಂದ ಅವರು ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಉತ್ತರ ಕರ್ನಾಟಕ ಕಡೆಗಣನೆ ವಿಚಾರ ಇರಬಹುದು ಎಂದರು.ಇನ್ನು
ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಅಂತ ಭಾಗ ಮಾಡಲು ಆಗಲ್ಲ ಒಂದು ವ್ಯವಸ್ಥೆಯೊಳಗೆ ಈ ಪ್ರಕ್ರಿಯೆ ಮಾಡಿದ್ದೇವೆ
ಉತ್ತರ ಕರ್ನಾಟಕಕ್ಕೆ ಮೊದಲ ಆದ್ಯತೆ ಕೊಟ್ಟವರು ಬಿಜೆಪಿ ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಅಧ್ಯಕ್ಷರನ್ನು ನೇಮಿಸಿದ್ದು ಇದೇ ಬಿಜೆಪಿ ಸಮಸ್ಯೆ ಏನಿದೆ ಅದನ್ನು ಬಗೆಹರಿಸಬೇಕು ಎಂದ ಅವರು
ಅದನ್ನು ಬಿಟ್ಟು ಯಾರೊ ವ್ಯಕ್ತಿಯನ್ನು ನೇಮಕ ಮಾಡಿದಾಗ ಈ ಬಗ್ಗೆ ಚರ್ಚಿಸುವುದು ಸರಿಯಲ್ಲ ಎಂದರು