ಬೆಂಗಳೂರು:– ಸಿಬಿಐ ತನಿಖೆ ಹೊತ್ತಲ್ಲಿ ಕೇಸ್ ವಾಪಸ್ ಪಡೆಯುವುದು ಸರಿಯಲ್ಲ ಎಂದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸಚಿವ ಸಂಪುಟದಲ್ಲಿ ಡಿಕೆಶಿ ಸಿಬಿಐ ಕೇಸ್ ವಾಪಸ್ ಪಡೆದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಇವರು ಪ್ರಾಮಾಣಿಕರು, ಪಾರದರ್ಶಕವಾಗಿದ್ದರೆ ಕೇಸ್ ಹಿಂಪಡೆಯುವ ಅಗತ್ಯವಿಲ್ಲ. ಇವರಿಗೆ ಭಯ ಯಾಕೆ, ಇವರ ಪ್ರಾಮಾಣಿಕತೆ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ ಎಂದು ಹೇಳಿದರು.
ಸಿಬಿಐ ತನಿಖೆ ಹೊತ್ತಲ್ಲಿ ಸರ್ಕಾರ ಕೇಸ್ ವಾಪಸ್ ಪಡೆಯುವುದು ಸರಿಯಲ್ಲ. ಇದು ಸರ್ಕಾರದ ಭ್ರಷ್ಟಾಚಾರವನ್ನು ಸಾರ್ವಜನಿಕವಾಗಿ ತಿಳಿಸುತ್ತದೆ. ನಾನು ಖಂಡಿಸುತ್ತೇನೆ. ಹಾಗಂತ ಇದೊಂದೇ ಕೇಸ್ ಇಲ್ಲ, ಜಾರಿ ನಿರ್ದೇಶನಾಲಯದಲ್ಲೂ ಸಾಕಷ್ಟು ಕೇಸ್ಗಳಿವೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.