ಬೆಂಗಳೂರು: ಬೆಂಗಳೂರು ಗ್ರಾಮಾಂತರದಲ್ಲಿ ಕುಕ್ಕರ್ ಹಂಚಿಕೆ ವಿಚಾರವಾಗಿ HDK ಹೇಳಿಕೆಗೆ ಹಬ್ಬ-ಹರಿದಿನ, ರಂಜಾನ್ ವೇಳೆ ಗಿಫ್ಟ್ ನೀಡುವುದು ನಮ್ಮ ಸಂಪ್ರದಾಯ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು ಗ್ರಾಮಾಂತರದಲ್ಲಿ ಕುಕ್ಕರ್ ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ ಅವರು, ಅವೆಲ್ಲವೂ ಹಳೇ ಫೋಟೋ ಮತ್ತು ವಿಡಿಯೋಗಳನ್ನು ತೋರಿಸಿದ್ದಾರೆ ಎಂದು ತಿಳಿಸಿದರು.
DVS PC: ‘ಸಹಿಸಿಕೊಳ್ಳೋರಿಗೆ ತಾಳ್ಮೆಯಿದ್ರೆ, ದುಃಖ ಕೊಟ್ಟವರು ಇದ್ದೂ ಸತ್ತಂತೆ’: DV ಸದಾನಂದಗೌಡ ಹೇಳಿದ್ಯಾಕೆ?
ಹಿಂದಿನಿಂದಲೂ ನಾವು ನಮ್ಮ ಕ್ಷೇತ್ರದ ಜನರಿಗೆ ಹಬ್ಬ ಹರಿದಿನದ ಸಂದರ್ಭದಲ್ಲಿ ಗಿಫ್ಟ್ ಕೊಟ್ಟಿದ್ದೇವೆ. ನನ್ನ ಮಗಳ ಮದುವೆಯ ಸಂದರ್ಭದಲ್ಲಿ ಎಲ್ಲರಿಗೂ ಸೀರೆಯನ್ನು ಕೊಟ್ಟಿದ್ದೇವೆ. ಕನಕೋತ್ಸವದ ಸಂದರ್ಭದಲ್ಲಿ ಮನೆಗಳಿಗೆ ಉಡುಗೊರೆ ನೀಡಿದ್ದೇವೆ. ಜೊತೆಗೆ, ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉಡುಗೊರೆಯನ್ನು ನೀಡಿದ್ದೇವೆ. ಇದು ನಮ್ಮ ಸಂಪ್ರದಾಯ ಎಂದು ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್ ನಡುವೆ ಅಸಮಾಧಾನ ಇತ್ತು. ಅದನ್ನು ಶಮನಗೊಳಿಸಿದ ನಂತರ ನನ್ನ ಮೇಲೆ ಏನಾದರೂ ಮಾತನಾಡಬೇಕಲ್ಲ. ಹಾಗಾಗಿ, ಈ ವಿಚಾರವನ್ನು ಮಾತನಾಡಿದ್ದಾರೆ. ಬಿಜೆಪಿಯವರಿಗೆ ಖುಷಿಪಡಿಸಬೇಕಲ್ಲ, ಹಾಗಾಗಿ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಅವರಿಗೆ ಖುಷಿಪಡಿಸಲು ನನ್ನನ್ನ ಬೈತಾರೆ ಅಂದ್ರೆ ಒಳ್ಳೆಯದಾಗಲಿ. ಅವರಿಗೆ ಒಳ್ಳೆಯ ಆರೋಗ್ಯ ಕೊಡಲಿ ಎಂದರು.