ಬೆಳಗಾವಿ: ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ಮಾಡಬೇಕಿರುವುದು ಸರ್ಕಾರದ ಜವಾಬ್ದಾರಿ ಎಂದು ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರ ಬಂಧನ ಖಂಡಿಸಿ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾದ ದೌರ್ಜನ್ಯ, ಅತ್ಯಾಚಾರದ ವಿರುದ್ಧ ಸ್ವಾಮೀಜಿ ಶಾಂತಿಯುತ ಪ್ರತಿಭಟನೆ ನಡೆಸಿದ್ದಾರೆ.
ರೈತರೇ ಗಮನಿಸಿ.. ಪ್ರತಿ ಹೆಕ್ಟೇರ್ʼಗೆ 10,000 ರೂಪಾಯಿ ನೀಡಲಿದೆ ಈ ಯೋಜನೆ! ಇಂದೇ ಅರ್ಜಿ ಸಲ್ಲಿಸಿ
ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸುವುದರಲ್ಲಿ ತಪ್ಪೇನಿದೆ? ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ಮಾಡಬೇಕಿರುವುದು ಸರ್ಕಾರದ ಜವಾಬ್ದಾರಿ ಎಂದು ಕಿಡಿಕಾರಿದರು. ಹಿಂದೂ ಸಮಾಜದ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಬಾಯಿಬಿಡಬೇಕು. ಖಂಡನೆ, ಮಂಡನೆ, ಎಚ್ಚರಿಕೆ ಸಾಕು ಮುಂದೆ ಕ್ರಮ ಕೈಗೊಳ್ಳಬೇಕು. ಹುಟ್ಟಿಸಿದಂತೆ ಬಾಂಗ್ಲಾದೇಶಕ್ಕೆ ಸರಿಯಾದ ಬುದ್ದಿ ಕಲಿಸುವ ಪ್ರಕ್ರಿಯೆ ಆಗಬೇಕು ಎಂದು ಆಗ್ರಹಿಸಿದರು.