ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಒಣಹವೆ ಮುಂದುವರಿದಿದೆ. ಸೋಮವಾರ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ರಾಜ್ಯದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ. ಇನ್ನು ಮುಂದಿನ 48 ಗಂಟೆಯ ಅವಧಿಯಲ್ಲೂ ರಾಜ್ಯದಾದ್ಯಂತ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ರಾಜ್ಯದಲ್ಲೂ ಮೈಕೊರೆವ ಚಳಿ: ಉತ್ತರ ಕರ್ನಾಟಕದ ವಿವಿಧೆಡೆ ಹಾಗೂ ಒಳನಾಡಿನಲ್ಲಿ ಚಳಿ ವಾತಾವರಣ ಇದೆ.
ರಾಜ್ಯದಲ್ಲಿ ಇನ್ನೂ ಎರಡರಿಂದ ಮೂರು ದಿನಗಳ ಕಾಲ ಚಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಗುರುವಾರ ಹಾಗೂ ಶುಕ್ರವಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು,ಕೆಲವು ಕಡೆ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.