ಬೆಂಗಳೂರು: ಎರಡೆರಡು ಹುದ್ದೆಗಳನ್ನು ನಿಭಾಯಿಸುವುದು ಕಷ್ಟವಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಂದು ನನಗೆ ಮಂತ್ರಿ ಅಥವಾ ಅಧ್ಯಕ್ಷಗಿರಿ ಪೈಕಿ ಒಂದು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದರು. ನಾನು ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡಿದ್ದೆ. ಶಿವಕುಮಾರ್ ಈಗ ಡಿಸಿಎಂ ಮತ್ತು ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟಿಸುವ ದೊಡ್ಡ ಜವಾಬ್ದಾರಿ ಸಹ ಇದೆ. ಹೈಕಮಾಂಡ್ನವರು ಏನು ತೀರ್ಮಾನ ಮಾಡ್ತಾರೋ ನೋಡಬೇಕು ಎಂದು ಹೇಳಿದರು.
Pumpkin Seeds: ಕುಂಬಳಕಾಯಿ ಬೀಜ ತಿಂದ್ರೆ ಈ ಆರೋಗ್ಯ ಸಮಸ್ಯೆಗಳು ಹತ್ತಿರವೂ ಸುಳಿಯಲ್ಲ!
ಎರಡು ಹುದ್ದೆಯಲ್ಲಿರುವ ಕಾರಣ ಸಹಜವಾಗಿ ಅಧ್ಯಕ್ಷ ಸ್ಥಾನ ಬದಲಾಯಿಸಿ ಅಂತ ಬೇರೆಯವರು ಕೇಳುತ್ತಾರೆ. ನಾನು ಅಧ್ಯಕ್ಷ ಇದ್ದಾಗಲೂ ಬದಲಾಯಿಸಿ ಅಂತ ಹೇಳಿದ್ದರು. ನಾವು ಒಂದು ಸಮುದಾಯ ಸೇರಿ ಸಭೆ ಮಾಡುತ್ತೇವೆ ಎಂದಿದ್ದನ್ನು ಹೈಕಮಾಂಡ್ ಗಮನಿಸಿದೆ. ಹಾಗೆಯೇ ಪಕ್ಷ ಸಂಘಟನೆ ಆಗುತ್ತಿದ್ಯಾ ಇಲ್ವೋ ಎಂಬುದನ್ನು ಹೈಕಮಾಂಡ್ ನಾಯಕರು ಗಮನಿಸುತ್ತಾರೆ ಎಂದರು.