ಬೆಂಗಳೂರು : ಸುಮಲತಾ ಅಂಬರೀಶ್ ಜೊತೆಗೆ ಮಾತನಾಡಿದ್ದೇವೆ. ಮಂಡ್ಯದಿಂದಲೇ ಸ್ಪರ್ಧೆ ಮಾಡ್ತೇನೆ ಎಂದು ಮೇಡಂ ಹೇಳಿದ್ದಾರೆ. ಬೇರೆ ಕಡೆ ಹೋಗಲ್ಲ ಎಂದು ಹೇಳಿದ್ದಾರೆ, ಖುಷಿಯಾಗಿದೆ ಎಂದು ಮಾಜಿ ಸಚಿವ ನಾರಾಯಣಗೌಡ ಹೇಳಿದರು.
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಭೇಟಿ ಬಳಿಕ ಮಾಜಿ ಸಚಿವ ನಾರಾಯಣಗೌಡ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ಗೂ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ದೇವೇಗೌಡರು, ಕುಮಾರಸ್ವಾಮಿ ಮಂಡ್ಯದಿಂದ ಹುಟ್ಟಿ ಬೆಳೆದವರಲ್ಲ. ರಾಮನಗರ ಅವರ ಲಕ್ಕಿ ಪ್ಲೇಸ್. ಕುಮಾರಸ್ವಾಮಿಯವರು ರಾಮನಗರದಿಂದ ಸ್ಪರ್ಧೆ ಮಾಡಲಿ. ಮಂಡ್ಯ ಜಿಲ್ಲೆಯಿಂದ ಸುಮಲತಾ ಅವರೇ ಮುಂದುವರಿದರೆ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದರು.