ಬೆಂಗಳೂರು: ನಿಮ್ಮಂತಹವರು ಪಕ್ಷದಲ್ಲಿ ಇರುವುದಕ್ಕಿಂತ ಬಿಟ್ಟು ಹೋದರೇನೇ ಸರಿ ಎಂದು ಸಂಸದ ಡಾ.ಕೆ ಸುಧಾಕರ್ ವಿರುದ್ಧ ಶಾಸಕ ಎಸ್.ಆರ್ ವಿಶ್ವನಾಥ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸುಧಾಕರ್ ರಾಜ್ಯಾಧ್ಯಕ್ಷರ ಬಗ್ಗೆ ಹಗುರ ಮಾತಾಡಿರೋದು ನನಗೆ ಹಿಡಿಸಲಿಲ್ಲ.
ಈ ಹಿಂದೆಯೂ ನನ್ನ ಬಗ್ಗೆ ಅವರು ಮಾತನಾಡಿದ್ದಾರೆ. ನಾನೇನು ದಡ್ಡ ಅಲ್ಲ, ನನಗೂ ಅರ್ಥ ಆಗುತ್ತೆ. ಅವರಿಂದ ಸರ್ಕಾರ ರಚನೆ ಆಗಿರಬಹುದು, ಆದ್ರೆ 17 ಜನರಲ್ಲಿ ಕೊನೆಯದಾಗಿ ಬಂದವರು ಸುಧಾಕರ್. ಅವರ ಮೇಲೆ ವಿಧಾನಸೌಧದಲ್ಲಿ ಹಲ್ಲೆ ನಡೆದಾಗ ನಾನೇ ಹೋಗಿ ಬಚಾವ್ ಮಾಡಿದೆ ಎಂದು ಹೇಳಿದ್ದಾರೆ.
Swollen Feet: ಪದೇ ಪದೇ ಪಾದಗಳು ಊದಿಕೊಳ್ಳುತ್ತವೆಯೇ..? ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದುಗಳು
ಸುಧಾಕರ್ ಕೋವಿಡ್ ನಿರ್ವಹಿಸಿದ್ರು, ಸಮರ್ಥ ಸಚಿವ ಆಗಿದ್ದವರು. ಸಮರ್ಥ ಸಚಿವ ಅನಿಸಿಕೊಂಡ ಮೇಲೆ ಚಿಕ್ಕಬಳ್ಳಾಪುರ ಯಾಕೆ ಸೋತ್ರಿ? ಚಿಕ್ಕಬಳ್ಳಾಪುರದಲ್ಲಿ ಒಳ್ಳೇ ಕೆಲಸ ನೀವು ಮಾಡಿದ್ರೆ ಜನ ಯಾಕೆ ನಿಮ್ಮನ್ನ ಸೋಲಿಸ್ತಿದ್ರು?
ಎಂಪಿ ಸ್ಥಾನದ ಟಿಕೆಟ್ ಸಿಗಲ್ಲ ಅಂತಾದಾಗ ಏನೇನು ಮಾತಾಡಿದ್ರಿ? ಕಾಂಗ್ರೆಸ್ನವರ ಜೊತೆ ಆಗ ನೀವು ಮಾತಾಡಲಿಲ್ಲವಾ? ಆಗ ನಿಮಗೆ ಪಕ್ಷ ನಿಷ್ಠೆ ಇತ್ತಾ? ನೀವು ಕಾಂಗ್ರೆಸ್ ಜೊತೆಗೆ ಮಾತಾಡಲಿಲ್ಲ ಅಂದ್ರೆ ಪ್ರಮಾಣ ಮಾಡಿ, ನಾನು ಪ್ರಮಾಣ ಮಾಡ್ತೀನಿ ಅಂತ ಸುಧಾಕರ್ಗೆ ಸವಾಲ್ ಹಾಕಿದ್ದಾರೆ.