ಬೆಂಗಳೂರು:– ಹೀಟ್ ನಿಂದ ಮೂಗಿನಲ್ಲಿ ರಕ್ತ ಬಂದಿದೆ ಅಷ್ಟೇ ಎಂದು ಕುಮಾರಸ್ವಾಮಿ ಆರೋಗ್ಯದ ಬಗ್ಗೆ ವೈದ್ಯರು ಸ್ಪಷ್ಟನೆ ಕೊಟ್ಟಿದ್ದಾರೆ.
ಅಬ್ಬಬ್ಬಾ ದರ್ಶನ್ ಬಗ್ಗೆ ಈ ಬಿಲ್ಡಪ್ ರಾಜ ಹೇಳಿದ್ದೆಲ್ಲಾ ಸುಳ್ಳಾ!? : ಮಾಜಿ ಖೈದಿಗೆ ನೋಟಿಸ್ ಕೊಟ್ಟ ಪೊಲೀಸ್!
ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಅತಿಯಾದ ಉಷ್ಣದಿಂದ(ಹೀಟ್) ಮೂಗಿನಲ್ಲಿ ರಕ್ತ ಬಂದಿದೆ. ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಕೆಲವೇ ಸಮಯದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ ಎಂದು ಹೇಳಿದ್ದಾರೆ.
ಇನ್ನೂ ಮೂಗಿನಿಂದ ರಕ್ತ ಸೋರಿಕೆಯಾದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನ ಜಯನಗರ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು(ಭಾನುವಾರ) ನಗರದಲ್ಲಿ ನಡೆಸಿದ ಸುದ್ದಿಗೋಷ್ಟಿ ವೇಳೆ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತ ಸೋರಿಕೆಯಾಗಿತ್ತು. ಹೀಗಾಗಿ ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.