ಹುಬ್ಬಳ್ಳಿ: ಕೆ.ಎಸ್. ಈಶ್ವರಪ್ಪ ಸೇರಿದಂತೆ ರಾಜ್ಯದ ಹಲವು ನಾಯಕರ ಅಸಮಾಧಾನವನ್ನು ಶಮನ ಮಾಡುವ ಪ್ರಯತ್ನ ಜಾರಿಯಲ್ಲಿದೆ. ಭಾನುವಾರದ ಸಂಜೆಯೊಳಗೆ ಎಲ್ಲವೂ ತಿಳಿಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಲಭಿಸದಿದ್ದಾಗ ಬೇಸರ ಸಹಜ. ಆದರೆ, ಬೇಸರಗೊಂಡವರು ಹೊರಗಿನವರಲ್ಲ. ಅವರ ಮನ ಒಲಿಸುವ ಕಾರ್ಯ ನಿರಂತರವಾಗಿದೆ. ರಾಷ್ಟಿçÃಯ ನಾಯಕರು ಎಲ್ಲವನ್ನೂ ಸರಿ ಪಡಿಸಲಿದ್ದಾರೆ ಎಂದರು.
ಈಗಾಗಲೇ ಚುನಾವಣಾ ದಿನಾಂಕ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಕನಿಷ್ಟ ೨೫ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಷ್ಟçದಲ್ಲಿ ಪ್ರಧಾನಿ ಮೋದಿ ಅವರ ಕೈ ಬಲಪಡಿಸುತ್ತೇವೆ. ರಾಜ್ಯದಿಂದ ಮೋದಿ ಅವರಿಗೆ ಬಹುದೊಡ್ಡ ಕೊಡುಗೆ ನೀಡುವ ಸಂಕಲ್ಪ ಮಾಡಿದ್ದೇವೆ. ಸ್ವಂತ ಬಲದಿಂದ ದೇಶದಲ್ಲಿ ೪೦೦ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮೂರನೇ ಬಾರಿಗೆ ಮೋದಿ ಮೋದಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂದಿನಿAದಲೇ ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಎಸ್.ಸಿ./ಎಸ್.ಟಿ ಹಾಗೂ ಓಬಿಸಿ ವರ್ಗಗಳ ಕಡೆ ಹೆಚ್ಚು ಗಮನ ಹರಿಸಲಾಗುವುದು. ಮಹಿಳಾ ಮತದಾನ ಹೆಚ್ಚಾಗುವಂತೆ ನೋಡಿಕೊಳ್ಳಲಾಗುವುದು. ಮೋದಿ ಅವರ ಸಾಧನೆ, ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.