ಚಿಕ್ಕಮಗಳೂರು: ಪ್ರಿಯಾಂಕ್ ಖರ್ಗೆ ಕಲಿಯುವುದು ಬಹಳ ಇದೆ, ಹಗುರವಾದ ಮಾತುಗಳು ಬೇಡ ಎಂದು ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಇಲ್ಲಿಗೆ ಎಲ್ಲಾ ಶಾಸಕರು ಬರುತ್ತಾರೆ, ಎಲ್ಲದರ ಬಗ್ಗೆಯೂ ಮಾತುಕತೆ ನಡೆಯುತ್ತೆ. ಎಲ್ಲರೂ ಒಂದು ಕಡೆ ಸೇರಿ ಖುಷಿಯಿಂದ ಇರೋಣ ಅಂತಾ ಇಲ್ಲಿಗೆ ಬಂದಿದ್ದೇವೆ ಜೆಡಿಎಸ್ ಪಕ್ಷದಿಂದ ಯಾರೂ ಹೋಗಲ್ಲ. ನಾವೆಲ್ಲ ಒಗ್ಗಟ್ಟಿನಿಂದ ಇದ್ದೇವೆ.
Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ
ಹಳೇ ಮೈಸೂರು ಪ್ರಾಂತ್ಯದಲ್ಲಿ ಗಾಳ ಹಾಕುವ ಕೆಲಸ ನಡೆಯುತ್ತಿದೆ. ಆದರೆ ಯಾರೂ ಕಿವಿಗೊಡಲ್ಲ. ನಾವು ಎಚ್ಡಿ ದೇವೇಗೌಡರ ಕುಟುಂಬದ ಸದಸ್ಯರಿದ್ದಂತೆ. ಹೆಚ್ಡಿಕೆ, ದೇವೇಗೌಡರ ಬಗ್ಗೆ ಗೌರವವಿದೆ. ನಾವ್ಯಾರೂ ಎಲ್ಲಿಗೂ ಹೋಗಲ್ಲ ಅಂತ ಎಲ್ಲರೂ ಮಾತು ಕೊಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು. ಎಚ್ಡಿ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು ಅದಕ್ಕಾಗಿ ಸುಳ್ಳು ಆರೋಪ ಮಾಡುತ್ತಾರೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಅವರು, ದೇವೇಗೌಡರ ಕುಟುಂಬ ಸೋಲು-ಗೆಲುವನ್ನ ಸಮಾನವಾಗಿ ಸ್ವೀಕರಿಸ್ತಾರೆ. ಯಾರೇ ಆದರೂ ಸಣ್ಣತನದ ಹೇಳಿಕೆ ಕೊಡುವುದು ಒಳ್ಳೆಯದ್ದಲ್ಲ ಎಂದು ತಿರುಗೇಟು ನೀಡಿದರು.