ಮುಂಬೈ: ಕೆಲಸದ ಅವಧಿ ಹೆಚ್ಚಿಸುವ ಬಗ್ಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಎಲ್ ಅಂಡ್ ಟಿ ಮುಖ್ಯಸ್ಥ ಎಸ್ಎನ್ ಸುಬ್ರಹ್ಮಣ್ಯನ್ ಅವರ ಹೇಳಿಕೆಗಳು ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದೀಗ ಇವರುಗಳ ಹೇಳಿಕೆಗೆ ತಿರುಗೇಟು ನೀಡಿರುವ ಖ್ಯಾತ ಉದ್ಯಮಿ ಆನಂದ್ ಮಹಿಂದ್ರ, ಎಷ್ಟೊತ್ತು ಕೆಲಸ ಮಾಡಿದ್ವಿ ಅನ್ನೋದಲ್ಲ ಮುಖ್ಯವಲ್ಲ, ಏನ್ ಕೆಲಸ ಮಾಡಿದ್ವಿ ಅನ್ನೋದು ಮುಖ್ಯ ಎಂದಿದ್ದಾರೆ.
ಸುಬ್ರಹ್ಮಣ್ಯನ್ ಅವರ ಹೆಚ್ಚುವರಿ ಅವಧಿಯ ಕೆಲಸದ ಹೇಳಿಕೆ ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಈ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟೆಕ್ ಮಹಿಂದ್ರಾ ಮತ್ತು ಮಹಿಂದ್ರಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ್ ಮಹೀಂದ್ರ, ಹೆಚ್ಚುವರಿ ಕೆಲಸದ ಅವಧಿಯ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
‘ನೀವು ವಾರದಲ್ಲಿ ಎಷ್ಟು ಗಂಟೆಗಳ ಕಾಲ ಕೆಲಸ ಮಾಡುತ್ತೀರಿ ಅನ್ನೋ ಪ್ರಶ್ನೆಗೆ, ‘ನಾನು ಈ ಪ್ರಶ್ನೆಯನ್ನು ಯಾವಾಗಲೂ ಅವಾಯ್ಡ್ ಮಾಡಲು ಬಯಸುತ್ತೇನೆ. ಎಷ್ಟು ಸಮಯ ಕೆಲಸ ಮಾಡುತ್ತೀರಿ ಅನ್ನೋದು ನನಗೆ ಯಾವತ್ತಿಗೂ ಪ್ರಶ್ನೆಯಲ್ಲ. ನನ್ನ ವರ್ಕ್ ಎಷ್ಟು ಕ್ವಾಲಿಟಿಯಲ್ಲಿತ್ತು ಅನ್ನೋದೇ ಮುಖ್ಯ. ನಾನು ಎಷ್ಟು ಗಂಟೆ ಕೆಲಸ ಮಾಡುತ್ತೀನಿ ಅನ್ನೋ ಪ್ರಶ್ನೆಗಳನ್ನ ಕೇಳಬೇಡಿ. 10 ಗಂಟೆಗಳಲ್ಲಿ ಪ್ರಪಂಚವನ್ನೇ ಬದಲಿಸಬಹುದು. ಎಷ್ಟೊತ್ತು ಕೆಲಸ ಮಾಡಿದ್ವಿ ಅನ್ನೋದು ಮುಖ್ಯವಲ್ಲ.. ಎಷ್ಟು ಗುಣಮಟ್ಟದ ಕೆಲಸ ಮಾಡಿದ್ವಿ ಅನ್ನೋದು ಮುಖ್ಯ ಎಂದು ಹೇಳಿದ್ದಾರೆ.
ಅಂತೆಯೇ ನೀವು ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೆ ಎಷ್ಟು ಗಂಟೆಯನ್ನು ಕಳೆಯುತ್ತೀರಿ ಎನ್ನುವ ಪ್ರಶ್ನೆಗೆ, ‘ನಾನು ಒಮ್ಮೊಮ್ಮೆ ನನ್ನಲ್ಲೇ ಈ ಪ್ರಶ್ನೆ ಕೇಳುತ್ತಿರುತ್ತೇನೆ. ನನ್ನ ಟ್ವೀಟ್ಅನ್ನು ನೋಡಿದವರಿಗೆ ಗೊತ್ತಿರುತ್ತದೆ. ನನಗೆ ಕಚೇರಿಯಲ್ಲಿ ಅದ್ಭುತವಾದ ಟೀಮ್ ಇದೆ. ಅವರು ನನ್ನ ತಲೆಯಲ್ಲೇ ಉಳಿದುಕೊಂಡು ಬಿಟ್ಟಿದ್ದಾರೆ. ನೀವ್ಯಾಕೆ ಟ್ವಿಟರ್ನಲ್ಲಿದ್ದೀರಿ, ಕೆಲಸ ಮಾಡಿ ಅನ್ನೋ ಕಾಮೆಂಟ್ಗಳು ಬರುತ್ತಲೇ ಇರುತ್ತದೆ. ಒಂದು ವಿಚಾರ ಇಲ್ಲಿ ತಿಳಿಸುತ್ತೇನೆ. ನನಗೆ ಏಕಾಂಗಿತನ ಕಾಡುತ್ತಿದ್ದೆ ಅನ್ನೋ ಕಾರಣಕ್ಕಾಗಿ ನಾನು ಎಕ್ಸ್ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.