ಆಟಗಾರರ ಕಳಪೆ ಪ್ರದರ್ಶನಕ್ಕೆ ಕುಟುಂಬ ದೂಷಿಸುವುದು ಸರಿಯಲ್ಲ ಎಂದು ಬಿಸಿಸಿಐ ನೂತನ ನಿಯಮದ ವಿರುದ್ಧ ಕಿಂಗ್ ಕೊಹ್ಲಿ ಕಿಡಿಕಾರಿದ್ದಾರೆ
ಕಳೆದ ಐದು ವರ್ಷಗಳಲ್ಲೇ ಅತ್ಯಂತ ಶುದ್ದ ಗಾಳಿ ; ಮಾಲಿನ್ಯ ಸುಧಾರಣೆಯತ್ತ ದೆಹಲಿ
ವಿದೇಶ ಪ್ರವಾಸಗಳಲ್ಲಿ ಆಟಗಾರರ ಕುಟುಂಬದ ಉಪಸ್ಥಿತಿಯನ್ನು ಸೀಮಿತಗೊಳಿಸುವ ಈ ನಿಯಮವು ಆಟಗಾರರ ಮನೋಬಲವನ್ನು ಕುಗ್ಗಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕುಟುಂಬದ ಬೆಂಬಲವು ಆಟಗಾರರಿಗೆ ಅತ್ಯಗತ್ಯ ಎಂದು ಒತ್ತಿ ಹೇಳಿದ ಕೊಹ್ಲಿ, ಈ ನಿಯಮವು ಅನ್ಯಾಯಕರ ಎಂದೂ ಹೇಳಿದ್ದಾರೆ. ಆಟಗಾರರ ಕಳಪೆ ಪ್ರದರ್ಶನಕ್ಕೆ ಕುಟುಂಬವನ್ನು ದೂಷಿಸುವುದು ಸರಿಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಆಟಗಾರರ ಕಳಪೆ ಪ್ರದರ್ಶನಕ್ಕೂ ಕುಟುಂಬ ಸದಸ್ಯರಿಗೂ ಯಾವುದೇ ಸಂಬಂಧವಿಲ್ಲ. ಆದರೆ ಆಟಗಾರರ ಕಷ್ಟದ ಸಂದರ್ಭದಲ್ಲಿ ಅವರ ಕುಟುಂಬಸ್ಥರ ಉಪಸ್ಥಿತಿ ಖಂಡಿತವಾಗಿಯೂ ಆಟಗಾರರಿಗೆ ನೆರವಾಗಲಿದೆ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
ಪ್ರವಾಸದ ಸಮಯದಲ್ಲಿ ಕುಟುಂಬದವರ ಉಪಸ್ಥಿತಿಯನ್ನು ಸೀಮಿತಗೊಳಿಸಿ ಕಳಪೆ ಪ್ರದರ್ಶನಕ್ಕೆ ಅವರನ್ನು ದೂಷಿಸಿದ್ದಕ್ಕಾಗಿ ನಿರಾಶೆ ವ್ಯಕ್ತಪಡಿಸಿದ ವಿರಾಟ್ ಕೊಹ್ಲಿ, ‘ಮೈದಾನದಲ್ಲಿ ಏನಾದರೂ ಆಟಗಾರನಿಗೆ ಅಹಿತಕರ ಸಂಗತಿ ನಡೆದರೆ, ಆತನಿಗೆ ಕುಟುಂಬದ ನೆರವು ಎಷ್ಟು ಮುಖ್ಯ ಎಂಬುದನ್ನು ಇಂತಹವರು ಅರ್ಥ ಮಾಡಿಕೊಳ್ಳುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಹಾಗಾಗಿ ಆಟದ ಮೇಲೆ ನಿಯಂತ್ರಣವಿಲ್ಲದವರನ್ನು ಗುರಿಯಾಗಿಸಿ ಅವರನ್ನು ಆಟಗಾರರಿಂದ ದೂರವಿಡುವುದು ನನಗೆ ತುಂಬಾ ನಿರಾಶೆಯಾಗಿದೆ. ಅನವಶ್ಯಕವಾಗಿ ಆಟಗಾರರ ಕುಟುಂಬದ ಮೇಲೆ ಆರೋಪ ಹೊರಿಸಲಾಗುತ್ತಿದೆ ಎಂದರು.