ಚಿಕ್ಕಬಳ್ಳಾಪುರ:- ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗಲಾಗ್ತಿಲ್ಲ, ಇದು ನನ್ನ ದುರದೃಷ್ಟ ಎಂದು ಜಗ್ಗಿ ವಾಸುದೇವ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ನನಗೆ ಅಹ್ವಾನ ಬಂದಿದೆ, ಆದರೆ ಹೋಗಲಾಗುತ್ತಿಲ್ಲ. ಇದು ದುರದೃಷ್ಟಕರ ಎಂದು ಈಶಾ ಸಂಸ್ಥಾಪಕ ಜಗ್ಗಿ ವಾಸುದೇವ್ ಹೇಳಿದರು.
ನನಗೆ ಈಗಾಗಲೇ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಪೂರ್ವ ನಿಗದಿ ಕಾರ್ಯಕ್ರಮ ಇರುವ ಕಾರಣದಿಂದ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗಲಾಗುತ್ತಿಲ್ಲ. ಇದು ನನ್ನ ದುರದೃಷ್ಟ, ನಾನು ಹೋಗಲಾಗುತ್ತಿಲ್ಲ ಅಂತ ಸ್ಪಷ್ಟಪಡಿಸಿದರು