ಬೆಳಗಾವಿ:- ಹಾವೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿ ಅಸಮಾಧಾನಗೊಂಡಿದ್ದ ಜಗದೀಶ್ ಶೆಟ್ಟರ್ಗೆ ಇದೀಗ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ
ವರದಿಗಳ ಬೆನ್ನಲ್ಲೇ ಸ್ಥಳೀಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಶೆಟ್ಟರ್ ಬದಲಿಗೆ ಸ್ಥಳೀಯರಿಗೆ ಟಿಕೆಟ್ ಕೊಡಬೇಕು ಎಂದು ಬೆಳಗಾವಿ ಬಿಜೆಪಿ ನಾಯಕರು ಆಗ್ರಹಿಸಿದ್ದು ಈ ವಿಚಾರವಾಗಿ ರಾಜನಾಯಕರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ಬೆಳಗಾವಿಯ ಬಿಜೆಪಿ ನಾಯಕರು ಸಾಂಬ್ರಾ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ತೆರಳಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸರವಾಲ್, ಸಂಘಟನಾ ಕಾರ್ಯದರ್ಶಿ ರಾಜೇಶ್ ಭೇಟಿಗೆ ಸಮಯ ಕೋರಿದ್ದಾರೆ. ಈ ನಾಯಕರನ್ನು ಭೇಟಿಯಾಗಲಿರುವ ಬೆಳಗಾವಿ ಮುಖಂಡರು ಶೆಟ್ಟರ್ ಬದಲು ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಲಿದ್ದಾರೆ. ರಾಜ್ಯ ನಾಯಕರ ಪ್ರತಿಕ್ರಿಯೆ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಅವರು ನಿರ್ಧರಿಸಿದ್ದಾರೆ. ಒಂದು ವೇಳೆ ರಾಜ್ಯ ನಾಯಕರಿಂದ ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ, ದೆಹಲಿಗೆ ತರಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಭೇಟಿಯಾಗಿ ಒತ್ತಡ ಹೇರಲು ನಿರ್ಧರಿಸಿದ್ದಾರೆ.