ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಸ್ಪರ್ಧೆಗೆ ಜಗದೀಶ್ ಶೆಟ್ಟರ್ ಹೆಸರು ಫೈನಲ್ ಮಾಡುವ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ವಿರೋಧ ವ್ಯಕ್ತವಾಗಿದೆ. ಪ್ರಭಾಕರ್ ಕೋರೆ ಮನೆಯಲ್ಲಿ ರಹಸ್ಯ ಸಭೆ ವಿಚಾರವಾಗಿ ಮಾತನಾಡಿದ ಅಭಯ್ ಪಾಟೀಲ್, ಕೋರ್ ಕಮಿಟಿ ಸಭೆಯಲ್ಲಿ ಅನೇಕ ವಿಷಯಗಳು ಚರ್ಚೆ ಆಗಿವೆ. ಅದನ್ನ ಹಿರಿಯರ ಗಮನಕ್ಕೆ ತರುವ ಕೆಲಸ ಸಾಮೂಹಿಕವಾಗಿ ಮಾಡಲಾಗುತ್ತದೆ. ಒಬ್ಬರೆ ಟಿಕೆಟ್ ಫೈನಲ್ ಮಾಡುವಂತದ್ದು ಅಲ್ಲ,
ಪಕ್ಷದ ಎಲ್ಲರೂ ಕೂಡಿ ನಿರ್ಣಯ ತೆಗೆದುಕೊಳ್ಳುತ್ತಾರೆ. ಕಳೆದ ಬಾರಿ ಲೀಡ್ಗಿಂತ 10 ಪಟ್ಟು ಹೆಚ್ಚಿನ ಲೀಡ್ ಪಡೆದುಕೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇವೆ. ಟಿಕೆಟ್ ವಿಚಾರ ಬಂದಾಗ ಅದನ್ನೂ ಚರ್ಚೆ ಮಾಡುತ್ತೇವೆ ಎಂದರು. ಜಿಲ್ಲೆಯ ಪ್ರತಿಯೊಬ್ಬರು ಅಪೇಕ್ಷಿತರಿದ್ದಾರೆ.
ಒಂದು ಕಾಲದಲ್ಲಿ ಕೊತ್ತಂಬರಿ ಸೊಪ್ಪು ಮಾರುತ್ತಿದ್ದ ವ್ಯಕ್ತಿ ಈಗ ಬಾಲಿವುಡ್ ಸ್ಟಾರ್ ನಟ..!
ಈ ಹಿಂದೆ ಬಾಬಾಗೌಡ, ಸುರೇಶ್ ಅಂಗಡಿ ಹಾಗೂ ಮಂಗಲಾ ಅಂಗಡಿಯವರು ನಮ್ಮ ಜಿಲ್ಲೆಯವರಿದ್ದರು. ನಮ್ಮ ಜಿಲ್ಲೆಯವರೇ ಅಭ್ಯರ್ಥಿ ಆಗಬೇಕು ಎಂಬುದು ಎಲ್ಲರ ಅಪೇಕ್ಷೆ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೊರಗಿನವರಿಗೆ ಟಿಕೆಟ್ ನೀಡದಂತೆ ಬಿಜೆಪಿ ನಾಯಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದರು.