ಬೆಂಗಳೂರು:- ಜೈ ಶ್ರೀರಾಮ್ ಎಂದ ಹಿಂದೂ ಯುವಕರ ಮೇಲೆ ಹಲ್ಲೆ ನಡೆದ ಕೇಸ್ ಗೆ ಸಂಬಧಪಟ್ಟಂತೆ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ವಿದ್ಯಾರಣ್ಯಪುರ ಪೊಲೀಸರಿಂದ ಆರೋಪಿ ಬಂಧಿಸಲಾಗಿದೆ.
ಕಾರಿನೊಳಗೆ ಪರಪುರುಷನ ಜೊತೆ ಸರಸ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಗೆ ಗಂಡ ಮಾಡಿದ್ದೇನು ಅಂತೀರಾ!?
ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಫರ್ಮಾನ್, ಸಮೀರ್ ಹಾಗೂ ಓರ್ವ ಅಪ್ರಾಪ್ತ. ಈ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಿನ್ನೆ ನಡೆದಿತ್ತು.
ಕಾರಿನಲ್ಲಿ ಹೋಗುವಾಗ ಇಬ್ಬರು ಮುಸ್ಲಿಂ ಯುವಕರು ಅಡ್ಡಹಾಕಿ ‘ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲ. ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿ, ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದರು. ಇದೇ ವೇಳೆ ಕಾರಿನಲ್ಲಿದ್ದ ಯುವಕರು, ಈ ಕುರಿತು ಪ್ರಶ್ನಿಸಿದಾಗ, ಅಲ್ಲೆ ಇದ್ದ ಮತ್ತೆ ಮೂವರು ಸೇರಿಕೊಂಡು ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದರು.